ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಂತಿಭೇದಿ ಪ್ರದೇಶಕ್ಕೆ ಟ್ಯಾಂಕರ್‌ನಲ್ಲಿ ನೀರು ಪೂರೈಕೆ

Published 7 ಜನವರಿ 2024, 6:12 IST
Last Updated 7 ಜನವರಿ 2024, 6:12 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ವಾಂತಿಭೇದಿಯಿಂದ ನಲುಗಿದ ನಗರದ ಕಾರಿಗನೂರಿನ ಶಿಕಾರಿ ಕ್ಯಾಂಪ್‌ ಪ್ರದೇಶಕ್ಕೆ ಭಾನುವಾರ ನಗರಸಭೆ ವತಿಯಿಂದ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗಿದ್ದು, ಜನ ಸರದಿಯಲ್ಲಿ ನಿಂತು ನೀರು ಹಿಡಿದುಕೊಂಡರು.

ಈ ಒಂದು ಪ್ರದೇಶದಲ್ಲಿ ಮಾತ್ರ ವಾಂತಿಭೇದಿ ಕಾಣಿಸಿಕೊಂಡಿದ್ದು, ಕಲುಷಿತ ನೀರು ಸೇವನೆಯಿಂದಲೇ ಅದು ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ನೀರನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.

ಈ ಮಧ್ಯೆ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಅವರು ಟಿ.ಬಿ.ಡ್ಯಾಂ ಪ್ರದೇಶದಲ್ಲಿರುವ ನಗರಸಭೆಯಿಂದ ನಿರ್ವಹಿಸಲಾಗುತ್ತಿರುವ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

14 ಮಂದಿಗೆ ಚಿಕಿತ್ಸೆ: ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ 14 ಮಂದಿ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯ ಮೂಲಗಳು ತಿಳಿಸಿವೆ. ಶುಕ್ರವಾರ ಎಂಟು ಮಂದಿ ಹಾಗೂ ಶನಿವಾರ ಆರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT