ಹೊಸಪೇಟೆ (ವಿಜಯನಗರ): ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ವಾರಾಂತ್ಯಕ್ಕೆ ವಿಶ್ವಪ್ರಸಿದ್ಧ ಹಂಪಿ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

‘ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಹಂಪಿಯ ಎಲ್ಲ ಸ್ಮಾರಕಗಳು, ದೇವಸ್ಥಾನಗಳು ಶನಿವಾರ, ಭಾನುವಾರ ಮುಚ್ಚಿರಲಿವೆ. ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕು’ ಎಂದು ಇಲಾಖೆಯ ಹಂಪಿ ವೃತ್ತದ ಸಹಾಯಕ ಸಂರಕ್ಷಣಾಧಿಕಾರಿ ಅನಿರುದ್ಧ್ ದೇಸಾಯಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಹಂಪಿ ಜೂ ಬಂದ್
ಹೊಸಪೇಟೆ (ವಿಜಯನಗರ): ‘ಹೊಸಪೇಟೆ ತಾಲ್ಲೂಕಿನ ಕಮಲಾಪುರ ಸಮೀಪದ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನಕ್ಕೆ (ಹಂಪಿ ಜೂ) ಜ. 8,9 ಮತ್ತು ಜ. 15,16ರಂದು ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ’ ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಎಂ.ಎನ್. ಕಿರಣ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.

‘ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಾರ್ವಜನಿಕರು ಸಹಕರಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.