ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಳಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ

Last Updated 18 ಜೂನ್ 2021, 16:31 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಐದು ದಿನಗಳ ಲಾಕ್‌ಡೌನ್‌ ಸಡಿಲಿಕೆ ನಂತರ ಶುಕ್ರವಾರ ಮಧ್ಯಾಹ್ನದಿಂದಲೇ ಅವಳಿ ಜಿಲ್ಲೆಗಳಾದ ವಿಜಯನಗರ–ಬಳ್ಳಾರಿಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಗೆ ಬಂದಿದೆ.

ನಗರದ ರೋಟರಿ ವೃತ್ತ, ಕಾಲೇಜು ರಸ್ತೆ, ಪುಣ್ಯಮೂರ್ತಿ ವೃತ್ತ ಸೇರಿದಂತೆ ಇತರೆ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್‌ ಅಳವಡಿಸಿ ವಾಹನಗಳ ಸಂಚಾರ ನಿರ್ಬಂಧಿಸಿದರು. ಎಲ್ಲೆಡೆ ಗಸ್ತು ತಿರುಗಿ, ಜನ ಹೊರಗೆ ಓಡಾಡದಂತೆ ತಡೆದರು. ಬಳ್ಳಾರಿ ನಗರದ ಪ್ರಮುಖ ರಸ್ತೆಗಳಲ್ಲೂ ಇದೇ ದೃಶ್ಯ ಕಂಡು ಬಂತು. ಶನಿವಾರ, ಭಾನುವಾರ ಸಂಪೂರ್ಣ ಲಾಕ್‌ಡೌನ್‌ ಇರಲಿದ್ದು, ತುರ್ತು ಸೇವೆಗಳು ಎಂದಿನಂತೆ ಇರಲಿವೆ.

ಶುಕ್ರವಾರ ಮಧ್ಯಾಹ್ನ 2ಗಂಟೆಗೂ ಮುಂಚೆಯೇ ನಗರದಲ್ಲಿ ಬಹುತೇಕ ಮಳಿಗೆಗಳು ಬಾಗಿಲು ಮುಚ್ಚಿದವು. ಜನಸಂಚಾರ ಕಡಿಮೆಯಾಯಿತು. ಪೊಲೀಸರು ರಸ್ತೆಗಿಳಿದ ನಂತರ ಜನರ ಓಡಾಟ ಸಂಪೂರ್ಣ ನಿಂತು ಹೋಯಿತು. ಬಳಿಕ ಇಡೀ ನಗರ ಸ್ತಬ್ಧಗೊಂಡಿತು.

ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಈ ಹಿಂದೆ ಎರಡು ದಿನವಷ್ಟೇ ಅಗತ್ಯ ವಸ್ತು ಖರೀದಿಗೆ ಅನುಮತಿ ಕೊಡಲಾಗಿತ್ತು. ಬೆಳಿಗ್ಗೆ ಆರರಿಂದ ಹತ್ತು ಗಂಟೆಯವರೆಗೆ ಸಮಯಾವಕಾಶ ನೀಡಲಾಗಿತ್ತು. ಬಳಿಕ ಅದನ್ನು ಐದು ದಿನಗಳವರೆಗೆ ವಿಸ್ತರಿಸಿ, ಮಧ್ಯಾಹ್ನ 2ರ ವರೆಗೆ ಅವಕಾಶ ಕೊಡಲಾಯಿತು. ಇದರಿಂದಾಗಿ ಮಾರುಕಟ್ಟೆ, ಮಳಿಗೆಗಳಲ್ಲಿ ಜನಜಂಗುಳಿ ತಗ್ಗಿತ್ತು. ಜನ ನಿರಾತಂಕವಾಗಿ ಹೊರಗೆ ಓಡಾಡಿ, ಅಗತ್ಯ ವಸ್ತು ಖರೀದಿಸಿ, ದೈನಂದಿನ ಕೆಲಸ ಮಾಡಿಕೊಂಡರು.

ಎರಡೂ ಜಿಲ್ಲೆಗಳಲ್ಲಿ ಗಣನೀಯ ಸಂಖ್ಯೆಯಲ್ಲಿ ಕೋವಿಡ್‌ ಪ್ರಕರಣಗಳು ಇಳಿಕೆಯಾಗುತ್ತಿರುವುದರಿಂದ ಜೂ.21ರಿಂದ ಲಾಕ್‌ಡೌನ್‌ ಇನ್ನಷ್ಟು ಸಡಿಲಿಸುವ ಸಾಧ್ಯತೆ ಹೆಚ್ಚಿದೆ. ಹೋಟೆಲ್‌, ಎಲೆಕ್ಟ್ರಾನಿಕ್‌ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಬಹುದು. ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರ ವರೆಗೆ ಅಗತ್ಯ ವಸ್ತು ಖರೀದಿಸಲು ಇರುವ ಸಮಯ ಸಂಜೆ ವರೆಗೆ ವಿಸ್ತರಣೆಯಾಗಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT