ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಿಳೆಯರ ಸಬಲೀಕರಣಕ್ಕೆ ಕ್ರಮ ಕೈಗೊಳ್ಳಿ

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಒತ್ತಾಯ
Published 14 ಮಾರ್ಚ್ 2024, 14:58 IST
Last Updated 14 ಮಾರ್ಚ್ 2024, 14:58 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಅಂತರರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಂಎಸ್‌) ಸರ್ಕಾರವನ್ನು ಆಗ್ರಹಿಸಿದೆ.

ಸಂಘಟನೆಯ ರಾಜ್ಯ ಖಜಾಂಚಿ ಈಶ್ವರಿ, ಜಿಲ್ಲಾ ಸಂಘಟನಾಕಾರರಾದ ಮಂಜುಳಾ ಡೊಳ್ಳಿ, ಶಿವಮ್ಮ ಎ. ಅವರ ನೇತೃತ್ವದಲ್ಲಿ ಇಲ್ಲಿನ ತಹಶೀಲ್ದಾರ್ ಕಚೇರಿಗೆ ಬಂದು, ಜಿಲ್ಲಾಧಿಕಾರಿ ಅವರಿಗೆ ಮನವಿ ಕಳುಹಿಸಿಕೊಡಲಾಯಿತು.

ಈಶ್ವರಿ ಮಾತನಾಡಿ, ದೇಶದ ಆರ್ಥಿಕತೆಯ ಭಾರ ಹೊತ್ತಿರುವ ಅಸಂಘಟಿತ ವಲಯದ ಕೋಟ್ಯಂತರ ದುಡಿಯುವ ಮಹಿಳೆಯರು ಅಸಹನೀಯ ವಾತಾವರಣದಲ್ಲಿ ದುಡಿಯುತ್ತಿದ್ದಾರೆ. ಆಶಾ, ಅಂಗನವಾಡಿ, ಬಿಸಿ ಊಟದಂತಹ ಯೋಜನೆಗಳಲ್ಲಿ, ಜವಳಿ, ಆಸ್ಪತ್ರೆ, ಕಾರ್ಖಾನೆಗಳಲ್ಲಿ ದುಡಿಯುವ ಮಹಿಳೆಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನವಿಲ್ಲ, ಮಹಿಳೆಯರಿಗೆ ನೈಜ ಘನತೆ, ಗೌರವ ಮತ್ತು ಹಕ್ಕುಗಳನ್ನು ಖಾತ್ರಿಪಡಿಸುವ ಸಮಾಜವಾದಿ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಈ ಮಹತ್ ಗುರಿಗೆ ಎಲ್ಲಾ ದಮನಿತ ದುಡಿಯುವ ಜನತೆ ಸಿದ್ಧರಾಗಬೇಕು’ ಎಂದರು.

ಶಿವಮ್ಮ ಮಾತನಾಡಿ, ಮಹಿಳಾ ದಿನವೆಂದರೆ ಅದು ದುಡಿಯುವ ಹೆಣ್ಣು ಮಕ್ಕಳ ಹೋರಾಟದ ದಿನ ಎಂದರು.

ಹಕ್ಕೊತ್ತಾಯಗಳು: ಹೆಣ್ಣು ಮಕ್ಕಳು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಜೀನ್ಸ್ ಅಥವಾ ಗಾರ್ಮೆಂಟ್ಸ್ ಉದ್ಯಮಗಳನ್ನು ಸ್ಥಾಪಿಸಲು ತುರ್ತಾಗಿ ಕ್ರಮ ಕೈಗೊಳ್ಳಬೇಕು, ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಸರ್ಕಾರಿ ಮಹಿಳಾ ಪದವಿ ಕಾಲೇಜನ್ನು ಸ್ಥಾಪಿಸಬೇಕು, ಹಳ್ಳಿಗಳಲ್ಲಿ ಸ್ವಚ್ಛ ಭಾರತ್ ಮಿಷನ್ ಅಡಿ ಮನೆಮನೆಗೂ ಶೌಚಾಲಯವನ್ನು ಸ್ಥಾಪಿಸಬೇಕು, ಹೆಣ್ಣು ಮಕ್ಕಳಿಗೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜನ್ನು ಸ್ಥಾಪಿಸಬೇಕು. ಕಾಲೇಜು ಹಂತದವರೆಗೂ ಮಧ್ಯಾಹ್ನದ ಬಿಸಿ ಊಟವನ್ನು ವಿಸ್ತರಿಸಬೇಕು, ಹೊಸಪೇಟೆಯಲ್ಲಿರುವ 100 ಹಾಸಿಗೆಗಳಿರುವ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT