ಹೂವಿನಹಡಗಲಿ (ವಿಜಯನಗರ) : ಪಟ್ಟಣದಲ್ಲಿ ಕಟ್ಟಡ ನಿರ್ಮಾಣ ಕೆಲಸ ಮಾಡುವ ವೇಳೆ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಕಟ್ಟಡ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ.
ಹಾವನೂರು ದಾದಾಪೀರ್ (36) ಮೃತರು. ಪಟ್ಟಣದ ಕಾಯಕ ನಗರದಲ್ಲಿ ಶನಿವಾರ ಕಟ್ಟಡ ನಿರ್ಮಾಣ ಕೆಲಸ ಮಾಡುವ ವೇಳೆ ಕಾರ್ಮಿಕ ದಾದಾಪೀರ್ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳಿಸಿಕೊಡಲಾಗಿತ್ತು. ಅಲ್ಲಿ ಮೃತಪಟ್ಟಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.