ಗುರುವಾರ , ಮಾರ್ಚ್ 23, 2023
21 °C

ಲಲಿತಕಲೆಗಳನ್ನು ಯುವಕರು ಮೈಗೂಡಿಸಿಕೊಳ್ಳಲಿ: ಎಂ. ಗೋವಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ‘ಕಲಾವಿದರು ತಮ್ಮ ಬದುಕಿನಲ್ಲಿ ಸಂಕಷ್ಟವಿದ್ದರೂ ಜನಮನ ರಂಜಿಸುವುದನ್ನು ಬಿಡುವುದಿಲ್ಲ. ಇಂದಿನ ಯುವ ಪೀಳಿಗೆ ಕೂಡ ಆ ಲಲಿತಕಲೆಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಗೀತ ಮತ್ತು ನೃತ್ಯ ವಿಭಾಗದ ಮುಖ್ಯಸ್ಥ ಎಂ. ಗೋವಿಂದ ತಿಳಿಸಿದರು.

ನಗರದಲ್ಲಿ ಸೋಮವಾರ ಸಂಜೆ ಗಾನಗಂಗಾ ಕಲಾ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯ ವಿಶೇಷ ಘಟಕ ಯೋಜನೆಯಡಿ ಏರ್ಪಡಿಸಿದ್ದ ಸಾಂಸ್ಕೃತಿಕೋತ್ಸವದಲ್ಲಿ ಮಾತನಾಡಿದರು.

‘ಸರ್ಕಾರವು ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಕಲಾವಿದರು ಇದರ ಸದುಪಯೋಗ ಪಡಿಸಿಕೊಂಡು ಸಾಧನೆ ಮಾಡಬೇಕು’ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಮಗ ಸಿದ್ದಾರ್ಥ ಸಿಂಗ್‌, ‘ಲಲಿತಕಲೆಗಳಲ್ಲಿ ಸಂಗೀತಕ್ಕೆ ಅಗ್ರ ಸ್ಥಾನವಿದೆ. ಸಂಗೀತ ಕಾರ್ಯಕ್ರಮಗಳು ಜನಮನ ರಂಜಿಸುತ್ತವೆ’ ಎಂದರು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮರಿಯಮ್ಮನಹಳ್ಳಿಯ ಡಾ.ಬಿ.ಅಂಬಣ್ಣ ಹಾಗೂ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ ಜಂಬಯ್ಯ ನಾಯಕ ಅವರನ್ನು ಸನ್ಮಾನಿಸಲಾಯಿತು. ನಂತರ ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಗಾನಗಂಗ ಕಲಾ ಪ್ರತಿಷ್ಠಾನದ ಅಧ್ಯಕ್ಷ ಯಲ್ಲಪ್ಪ ಭಂಡರ್‌ದಾರ್‌, ಎಚ್.ಹನುಮಂತಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು