ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಣ್ಣನವರ ವಚನ ಜಗತ್ತಿಗೆ ಮಾದರಿ

Last Updated 26 ಏಪ್ರಿಲ್ 2020, 16:22 IST
ಅಕ್ಷರ ಗಾತ್ರ

ವಿಜಯಪುರ: ವಿಶ್ವಗುರು ಬಸವಣ್ಣನವರ ವಚನಗಳು ಇಂದಿನ ಸಮಾಜಕ್ಕೆ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಸವಣ್ಣನವರ ಜಯಂತಿ ಅಂಗವಾಗಿ ಅವರ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ಅರ್ಪಿಸಿ ಅವರು ಮಾತನಾಡಿದರು.

ಮಹಿಳೆಯರಿಗೆ ಸಮಾನತೆ ಹಾಗೂ ಹಕ್ಕುಗಳಿಗಾಗಿ ಬಸವಣ್ಣ ಧ್ವನಿ ಎತ್ತಿದ್ದರು. ಲಿಂಗ, ಬೇಧ ಮರೆತು ಮಾನವರ ಏಕತೆಗಾಗಿ ಹೋರಾಟ ಮಾಡಿ ದುಡಿಯುವ ವರ್ಗಕ್ಕಾಗಿ, ನೋಂದವರ ಏಳಿಗೆಗಾಗಿ ಅವಿರತ ಶ್ರಮಿಸಿದ್ದಾರೆ ಎಂದರು.

ಬಸವಣ್ಣನವರ ಆದರ್ಶ, ತತ್ವ ಮತ್ತು ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕೋವಿಡ್-19 ಸಂಕಷ್ಟದ ಪರಿಸ್ಥಿತಿಯಲ್ಲಿ ಉಳ್ಳವರು ಬಡಜನರಿಗೆ ನೆರವಾಗುವಂತೆ ಮನವಿ ಮಾಡಿದರು.

ಕಾರ್ಯಕ್ರಮಕ್ಕೂ ಮೊದಲು ನಗರದ ಬಸವೇಶ್ವರ ವೃತ್ತದಲ್ಲಿ ಇರುವ ಅಶ್ವಾರೂಢ ಬಸವೇಶ್ವರರ ಮೂರ್ತಿಗೆ ಮಾಲಾರ್ಪಣೆ ಮಾಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್ ಅಗರವಾಲ, ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಾಮ, ಉಪವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಸಿದ್ದಿ, ಡಿ.ಎಸ್.ಪಿ ಲಕ್ಷ್ಮೀ ನಾರಾಯಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೊದ್ದಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪೂಜಾರಿ, ಸಮಾಜದ ಮುಖಂಡರಾದ ಸಿದ್ರಾಮಪ್ಪ ಉಪ್ಪಿನ, ಬಸಯ್ಯ ಹಿರೇಮಠ, ಶರಣು ಸಬರದ, ಸೋಮನಗೌಡ ಕಲ್ಲೂರ, ಡಾ.ಬಾಬು ನಾಗೂರ, ಎಸ್.ಜಿ ನಾಗಠಾಣ, ಸಂಗು ಸಜ್ಜನ, ಅಡಿವೆಪ್ಪ ಸಾಲಗಲ್ಲ, ವಿಜಯಕುಮಾರ ಡೋಣಿ, ಜಂಬುನಾಥ ಕಂಚ್ಯಾಣಿ, ಭೀಮರಾಯ ಜಿಗಜಿಣಗಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT