ಸೋಮವಾರ, ಮಾರ್ಚ್ 1, 2021
30 °C

ವಿಜಯಪುರದಲ್ಲಿ ಅಪಘಾತ: ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಪಿಡಿಒ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ನಗರದ ಹೊರವಲಯದಲ್ಲಿ ನಿನ್ನೆ ತಡರಾತ್ರಿ ಲಾರಿ ಡಿಕ್ಕಿಯಾಗಿ ಪಿಡಿಒ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.

ರೇಡಿಯೋ ಕೇಂದ್ರದ ಬಳಿ ಈ ಘಟನೆ ನಡೆದಿದೆ. ಬೈಕಿನಲ್ಲಿದ್ದ ನವೀನಕುಮಾರ ಅಶೋಕ ಗೋಪಶೆಟ್ಟಿ(31) ಸಾವಿಗೀಡಾದ ಪಿಡಿಒ ಆಗಿದ್ದಾರೆ. ವಿಜಯಪುರ ನಗರದ ಗಣೇಶ ನಗರ ನಿವಾಸಿಯಾಗಿದ್ದ ಪಿಡಿಒ ವಿಜಯಪುರ ತಾಲ್ಲೂಕು ಪಂಚಾಯಿತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮತ್ತೊಂದು ಪ್ರಕರಣದಲ್ಲಿ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಶಿವಲೀಲಾ ಮಲ್ಲಿಕಾರ್ಜುನ ಬಿಜಾಪುರ(50) ಸಾವಿಗೀಡಾದ ಮಹಿಳೆಯಾಗಿದ್ದಾರೆ. ಬೈಕ್ ಸವಾರನಿಗೂ ಗಾಯವಾಗಿದ್ದು, ಅಲ್ ಅಮೀನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು