ಶುಕ್ರವಾರ, ಮೇ 29, 2020
27 °C

ವಿಜಯಪುರ: ಆಹಾರ ಕಿಟ್‌ ದುರುಪಯೋಗದ ವಿರುದ್ಧ ಕ್ರಮದ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ವಿಜಯಪುರ: ಕಂಟೈನ್‌ಮೆಂಟ್‌ ಪ್ರದೇಶದಲ್ಲಿ ದಾನಿಗಳಿಂದ ಸಂಗ್ರಹಿಸಿ ಬಡವರಿಗೆ ನೀಡಲಾಗುತ್ತಿರುವ ಆಹಾರ ಪದಾರ್ಥಗಳ ಕಿಟ್‌ಗಳನ್ನು ಕೆಲವರು ದುರುಪಯೋಗ ಪಡಿಸಿಕೊಂಡು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದುರುಪಯೋಗ ಪಡಿಸಿಕೊಂಡವರ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಅಡಿ ದೂರು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಫರ್‌ ಜೋನ್‌ಗೆ ವಿನಾಯ್ತಿ: ಕೋವಿಡ್‌ ದೃಢಪಟ್ಟಿರುವ ವಿಜಯಪುರದ ಕಂಟೈನ್‌ಮೆಂಟ್‌ ಜೋನ್‌ಗೆ ಹೊಂದಿಕೊಂಡಿರುವ ಬಫರ್‌ ಜೋನ್‌ಗೆ ವಿನಾಯ್ತಿ ನೀಡಲಾಗಿದ್ದು, ಇದರಿಂದ 3 ಸಾವಿರ ಕುಟುಂಬಗಳು ಬಫರ್‌ ಜೋನ್‌ನಿಂದ ಹೊರಬರಲಿವೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು