ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ನಿರಂತರ ನಿಗಾ ವಹಿಸಲು ಸೂಚನೆ

ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ ವಿಡಿಯೊ ಸಂವಾದ
Last Updated 2 ಏಪ್ರಿಲ್ 2020, 11:22 IST
ಅಕ್ಷರ ಗಾತ್ರ

ವಿಜಯಪುರ: ವಿದೇಶದಿಂದ ಹಾಗೂ ಕೋವಿಡ್-19 ಬಾಧಕ ಪ್ರದೇಶಗಳಿಂದ ಜಿಲ್ಲೆಗೆ ಬಂದಿರುವವರ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕು ತಡೆಗೆ ತೆಗೆದುಕೊಂಡ ಕ್ರಮಗಳ ಕುರಿತು ಅವರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಗುರುವಾರ ವಿಡಿಯೊ ಸಂವಾದದಲ್ಲಿ ಮಾತನಾಡಿದರು.

ನಗರ ಮತ್ತು ಗ್ರಾಮಿಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಆದ್ಯತೆ ನೀಡಬೇಕು. ಕೋವಿಡ್-19 ಸೋಂಕು ತಡೆಯಲು ಜನ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ರೈತರು ಬೆಳೆದ ಬೆಳೆಯ ಮಾರಾಟಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾರಿಗೂ ತೊಂದರೆಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಜನತೆ ಸದಾ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಅವರಿಗೆ ದಿನಸಿ ಸಾಮಾನು ಹಾಗೂ ಅವಶ್ಯಕ ವಸ್ತುಗಳನ್ನು ಒದಗಿಸಲು ಅಧಿಕಾರಿಗಳು ಗಮನಹರಿಸಬೇಕು ಎಂದರು.

ಬಡವರು ಹಾಗೂ ಹೊರ ರಾಜ್ಯಗಳಿಂದ ಬಂದ ಕಾರ್ಮಿಕರಿಗೆ ಅಗತ್ಯ ಅನುಕೂಲ ಹಾಗೂ ಆಹಾರ ಕಲ್ಪಿಸಬೇಕು ಎಂದು ಹೇಳಿದರು.

ಜಿಲ್ಲೆಯ ವಿವಿಧ ತಾಲ್ಲೂಕುಗಳ ತಹಶೀಲ್ದಾರ್‌ಗಳ ಜೊತೆ ದೂರವಾಣಿಯ ಮೂಲಕ ಮಾತನಾಡಿದ ಸಚಿವರು, ಎಲ್ಲ ತಾಲ್ಲೂಕುಗಳಲ್ಲಿ ಪ್ರಸ್ತುತ ಕೊರೊನಾ ಸೋಂಕಿನ ಕುರಿತು ಮಾಹಿತಿ ಪಡೆದರು.

ಕೊರೊನಾ ಸೋಂಕಿನ ಕುರಿತು ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನೀಡಿಬೇಕು. ಸಾರ್ವಜನಿಕರು ಹೊರ ಬರದಂತೆ ಹಾಗೂ ಅನಾವಶ್ಯಕವಾಗಿ ತಿರುಗಾಡದಂತೆ ಅರಿವು ಮೂಡಿಸುವ ಕಾರ್ಯ ಮಾಡಬೇಕು ಎಂದು ಸೂಚಿಸಿದರು.

ಕೋವಿಡ್-19 ಸಾಂಕ್ರ್ರಾಮಿಕ ರೋಗದ ಬಗ್ಗೆ ಜಿಲ್ಲೆಯ ಪ್ರತಿ ದಿನದ ಮಾಹಿತಿಯನ್ನು ದೂರವಾಣಿ ಮೂಲಕ ನೀಡಬೇಕು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT