ಭಾನುವಾರ, ಅಕ್ಟೋಬರ್ 20, 2019
27 °C

ವಿಜಯಪುರ ಜಿಲ್ಲೆಯಲ್ಲಿ ಉತ್ತಮ ಮಳೆ: ಬೆಳೆಗಳಿಗೆ ಜೀವಕಳೆ

Published:
Updated:

ವಿಜಯಪುರ: ನಗರ ಸೇರಿದಂತೆ ಜಿಲ್ಲೆಯ ಕೆಲ ಭಾಗಗಳಲ್ಲಿ ಸೋಮವಾರ ರಾತ್ರಿ ಮತ್ತು ಮಂಗಳವಾರ ಬೆಳಗಿನ ಜಾವ ಉತ್ತಮ ಮಳೆ ಸುರಿದಿದೆ.

ಸಿಂದಗಿ, ತಾಳಿಕೋಟೆ, ಬಸವನಬಾಗೇವಾಡಿ, ಇಂಡಿ ಪಟ್ಟಣ ಸೇರಿದಂತೆ ಹಲವೆಡೆ ಎರಡು ಗಂಟೆಗೂ ಅಧಿಕ ಮಳೆಯಾಗಿದೆ.

ಇದರಿಂದಾಗಿ ಬೆಳೆಗಳಿಗೆ ಜೀವಕಳೆ ಬಂದಿದ್ದು, ತೊಗರಿ ಬೆಳೆದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹಿಂಗಾರು ಹಂಗಾಮು ಬಿತ್ತನೆಗೆ ರೈತರು ಸಜ್ಜಾಗುತ್ತಿದ್ದು, ಭೂಮಿ ಹದ ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಕೃಷಿ ಇಲಾಖೆಯು ಆರು ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಿದ್ದು, ಕಡಲೆ, ಬಿಳಿಜೋಳ, ರಾಸಾಯನಿಕ ಗೊಬ್ಬರವನ್ನು ದಾಸ್ತಾನು ಮಾಡಿಕೊಂಡಿದೆ.

ಈ ತಿಂಗಳ ಅಂತ್ಯದಲ್ಲಿ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಹಿಂಗಾರು ಬಿತ್ತನೆ ಆರಂಭಿಸಬಹುದು ಎಂದು ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.

Post Comments (+)