ಆಲಮಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಆಲಮಟ್ಟಿ ಜಲಾಶಯದ ಒಳಹರಿವು ಸತತ ಮೂರನೇ ದಿನ ಮಂಗಳವಾರವೂ ಲಕ್ಷ ಕ್ಯುಸೆಕ್ ದಾಟಿತ್ತು.
ಭಾನುವಾರದಿಂದ ನಿತ್ಯ 1 ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಆಲಮಟ್ಟಿ ಜಲಾಶಯಕ್ಕೆ ಹರಿದು ಬರುತ್ತಿದೆ. ಮಂಗಳವಾರ ಸಂಜೆ ಒಳಹರಿವು 1,41,672 ಕ್ಯುಸೆಕ್‌ಗೆ ಏರಿಕೆಯಾಗಿದೆ. 10 ಟಿಎಂಸಿ ಅಡಿಗಳಷ್ಟು ನೀರು ಹರಿದು ಬಂದಿದೆ.
ಹೊರಹರಿವನ್ನು ಮಧ್ಯಾಹ್ನ 12 ಗಂಟೆಯಿಂದ 15 ಸಾವಿರ ಕ್ಯುಸೆಕ್‌ಗೆ ಹೆಚ್ಚಿಸಲಾಗಿದೆ. ವಿದ್ಯುತ್ ಉತ್ಪಾದನೆ 100 ಮೆಗಾ ವಾಟ್‌ಗೆ ಹೆಚ್ಚಳವಾಗಿದೆ. ಸದ್ಯಕ್ಕೆ ಪ್ರವಾಹದ ಆತಂಕ ಇಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.