ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಏಳನೇ ಬಾರಿಗೆ ಸಂಸದರಾಗಿ ಜಿಗಜಿಣಗಿ ಪ್ರಮಾಣ ವಚನ ಸ್ವೀಕಾರ

Published 24 ಜೂನ್ 2024, 16:21 IST
Last Updated 24 ಜೂನ್ 2024, 16:21 IST
ಅಕ್ಷರ ಗಾತ್ರ

ವಿಜಯಪುರ: ವಿಜಯಪುರ ಎಸ್‌.ಸಿ.ಮೀಸಲು ಲೋಕಸಭಾ ಕ್ಷೇತ್ರದ ನೂತನ ಸಂಸದ ರಮೇಶ ಜಿಗಜಿಣಗಿ ಅವರು ನವದೆಹಲಿಯ ಸಂಸತ್‌ ಭವನದಲ್ಲಿ ಸೋಮವಾರ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

‘ರಮೇಶ ಚಂದಪ್ಪ ಜಿಗಜಿಣಗಿ ಹೆಸರಿನವನಾದ ನಾನು ಲೋಕಸಭೆ ಸದಸ್ಯನಾಗಿ ಚುನಾಯಿತನಾಗಿದ್ದು, ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನಕ್ಕೆ ಅನುಗುಣವಾಗಿ ಸತ್ಯ, ಶ್ರದ್ಧೆ, ನಿಷ್ಠೆ ಹೊಂದಿರುತ್ತೇನೆ. ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆ ಎಂದು ಹಾಗೂ ನಾನು ಇನ್ನು ಮುಂದೆ ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ದೇವರ ಹೆಸರಿಲ್ಲಿ ಪ್ರಮಾಣ ಮಾಡುತ್ತೇನೆ’ ಎಂದು ಪ್ರಮಾಣ ವಚನ ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT