ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

21 ಸಾರಿಗೆ ನೌಕರರ ಅಮಾನತು

Last Updated 19 ಏಪ್ರಿಲ್ 2021, 15:13 IST
ಅಕ್ಷರ ಗಾತ್ರ

ವಿಜಯಪುರ: ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಜಿಲ್ಲೆಯಲ್ಲಿ ಮುಷ್ಕರ ನಿರತ ನೌಕರರ ಪೈಕಿ ಸೋಮವಾರ21 ಸಿಬ್ಬಂದಿಯನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ ಎಂದು ಈಶಾನ್ಯ ಕರ್ನಾಟಕರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ.

ಕರ್ತವ್ಯಕ್ಕೆ ಗೈರುಹಾಜರು ಆಗಿರುವುದು ಮತ್ತು ಕರ್ತವ್ಯಕ್ಕೆ ಬರುವವರಿಗೆ ತೊಂದರೆ ಮಾಡಿ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಮುದ್ದೇಬಿಃಆಳ ಘಟಕದ 21 ಮತ್ತು ತಾಳಿಕೋಟೆ ವಿಭಾಗದ ಇಬ್ಬರು ಸೇರಿದಂತೆ 23 ಜನ ಚಾಲಕ, ನಿರ್ವಾಹಕರನ್ನು ಬೇರೆ ಬೇರೆ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸೋಮವಾರ 111 ಬಸ್‌ಗಳು ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿವೆ. ಬೇರೆ ವಿಭಾಗಗಳಿಂದ ಸಹ ಬಸ್‌ಗಳು ಜಿಲ್ಲೆಗೆ ಬಂದಿದ್ದರಿಂದ, ಖಾಸಗಿ ವಾಹನಗಳು ಬಸ್‌ ನಿಲ್ದಾಣದ ಪ್ರವೇಶಿಸದಂತೆ ಕ್ರಮಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

‘ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು. ಇಲ್ಲವಾದರೆ ಕಠಿಣ ಕ್ರಮಕೈಗೊಳ್ಳಲಾಗುವುದು’ ಎಂದು ಕುರುಬರ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT