ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ | ಆಲಮಟ್ಟಿ ಜಲಾಶಯದಿಂದ 3,500 ಕ್ಯುಸೆಕ್ ನೀರು ಹೊರಕ್ಕೆ

Published 11 ಜುಲೈ 2024, 15:41 IST
Last Updated 11 ಜುಲೈ 2024, 15:41 IST
ಅಕ್ಷರ ಗಾತ್ರ

ವಿಜಯಪುರ: ಆಲಮಟ್ಟಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಜಲಾಶಯ ಭರ್ತಿಗೂ ಮುನ್ನವೇ ನಾರಾಯಣಪುರ ಜಲಾಶಯಕ್ಕೆ ನೀರು ಬಿಡಲು ಗುರುವಾರದಿಂದ ಆರಂಭಿಸಲಾಗಿದೆ.

‘ಗುರುವಾರ ಮಧ್ಯಾಹ್ನ 12 ರಿಂದ 3,500 ಕ್ಯುಸೆಕ್ ನೀರನ್ನು ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಘಟಕದ ಮೂಲಕ ನೀರನ್ನು ಹೊರಬಿಡಲಾಗುತ್ತಿದೆ. ರಾತ್ರಿ ವೇಳೆಗೆ ಒಳಹರಿವು ಹೆಚ್ಚಾದರೆ ಮಾತ್ರ ಹೊರಹರಿವನ್ನು 7,500 ಕ್ಯುಸೆಕ್ ಗೆ ಹೆಚ್ಚಿಸಲಾಗುವುದು’ ಎಂದು ಆಲಮಟ್ಟಿ ಜಲಾಶಯದ ಮೂಲಗಳು ತಿಳಿಸಿವೆ.

519.60 ಮೀ ಎತ್ತರದ ಜಲಾಶಯದಲ್ಲಿ ಗುರುವಾರ 517 ಮೀ ವರೆಗೆ ನೀರು ಸಂಗ್ರಹವಾಗಿದೆ. ಆಲಮಟ್ಟಿ ಹೊರಹರಿವು ಆರಂಭಿಸಿರುವುದರಿಂದ ಕೆಲ ದಿನಗಳಿಂದ ಬಂದಿದ್ದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಕೇಂದ್ರ ಗುರುವಾರದಿಂದ ಆರಂಭಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT