ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆ ಅಧ್ಯಕ್ಷರಾದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಬಿ.ಎಲ್.ಡಿ.ಇ ಡೀಮ್ಡ್ ವಿವಿಯಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರ ಹಾಸ್ಟೆಲ್ ನಿರ್ಮಾಣಕ್ಕೆ ₹50 ಲಕ್ಷ ವಿಶೇಷ ಅನುದಾನ ನೀಡಿದರು.

ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಮಹಿಳಾ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಶಾಂತಾದೇವಿ ಟಿ. ಅವರಿಗೆ ಮಂಗಳವಾರ ವಿಶೇಷ ಅನುದಾನದ ಚೆಕ್ ಅನ್ನು ಹಸ್ತಾಂತರಿಸಿದರು.

ಇತ್ತೀಚೆಗೆ ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವರಿಗೆ, ವಿದ್ಯಾರ್ಥಿನಿಯರಿಗೆ ಮೂಲಸೌಕರ್ಯ ಒದಗಿಸಲು ಅನುದಾನದ ಕೊರತೆ ಇದೆ ಎಂದು ಕುಲಪತಿಯವರು ಗಮನ ಸೆಳೆದಿದ್ದರು. ಕಾರ್ಯಕ್ರಮದಲ್ಲಿ ನೀಡಿದ್ದ ಭರವಸೆಯಂತೆ ಸಚಿವರು ಅನುದಾನದ ಚೆಕ್ ನೀಡಿದರು.

ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದರು.

ಮುಂಬರುವ ದಿನಗಳಲ್ಲಿ ಸರ್ಕಾರದಿಂದ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಮಹಿಳಾ ವಿಶ್ವವಿದ್ಯಾಲಯ ಪ್ರಭಾರ ಕುಲಪತಿ ಪ್ರೊ.ಶಾಂತಾದೇವಿ ಟಿ. ಮಾತನಾಡಿ, ಬಿ.ಎಲ್.ಡಿ.ಇ ಡೀಮ್ಡ್ ವಿವಿ ಮತ್ತು ಸಚಿವ ಎಂ.ಬಿ.ಪಾಟೀಲ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಾಧಿಪತಿ ವೈ. ಎಂ. ಜಯರಾಜ, ಕುಲಪತಿ ಆರ್. ಎಸ್. ಮುಧೋಳ, ರಿಜಿಸ್ಟ್ರಾರ್ ಆರ್. ವಿ. ಕುಲಕರ್ಣಿ, ಪ್ರಾಚಾರ್ಯ ಅರವಿಂದ ಪಾಟೀಲ, ಪರೀಕ್ಷೆ ನಿಯಂತ್ರಾಣಾಧಿಕಾರಿ ಎಸ್.ಎಸ್.ದೇವರಮನಿ, ಮಹಿಳಾ ವಿವಿ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ, ವಿದ್ಯಾರ್ಥಿಗಳ ಕಲ್ಯಾಣಾಧಿಕಾರಿ ಪ್ರೊ. ಲಕ್ಷ್ಮಿದೇವಿ ವೈ, ಸಹ ರಜಿಸ್ಟ್ರಾರ್ ನಟರಾಜ ಎ. ದುರಗಣ್ಣನವರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.