ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರದಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ಧ್ವಜಾರೋಹಣ

Last Updated 26 ಜನವರಿ 2023, 5:11 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲಾಡಳಿತದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ ಧ್ವಜಾರೋಹಣ ನೆರವೇರಿಸಿದರು.

ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಮಾತನಾಡಿ, ಜಿಲ್ಲೆಯ 173 ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತಿಸಲಾಗುತ್ತಿದ್ದು, 76 ತಾಂಡಾಗಳಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ.

ಜಿಲ್ಲೆಯ 13 ತಾಂಡಾಗಳ 1783 ಫಲಾನುಭವಿಗಳಿಗೆ ಜ.19 ರಂದು ಪ್ರಧಾನಿ ಮೋದಿ ಅವರು ಹಕ್ಕುಪತ್ರ ವಿತರಿಸಿದ್ದಾರೆ ಎಂದರು.

ಗ್ರಾಮ ಒನ್ ಯೋಜನೆಯಡಿ ಜಿಲ್ಲೆಯಲ್ಲಿ 211 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 292 ಗ್ರಾಮ ಒನ್ ಕೇಂದ್ರಗಳನ್ನು ಆರಂಭಿಸಲಾಗಿದೆ. ಇದುವರೆಗೆ 12,60,699 ಅರ್ಜಿಗಳನ್ನು ವಿಲೇವಾರಿ ಮಾಡಿ ರಾಜ್ಯದಲ್ಲಿಯೇ ಜಿಲ್ಲೆ ದ್ವಿತಿಯ ಸ್ಥಾನ ಪಡೆದಿದೆ ಎಂದರು.

ಪಥ ಸಂಚನ:
ಪೊಲೀಸ್, ಗೃಹರಕ್ಷಕ ದಳ, ಐಬಿಆರ್, ಎನ್ ಸಿಸಿ, ಸ್ಕೌಟ್ ಅಂಡ್ ಗೈಡ್ಸ್, ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚನ ನಡೆಯಿತು.

ಸನ್ಮಾನ:
ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.
ಶಾಲಾ, ಕಾಲೇಜು ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ಆಕರ್ಷಕ ನೃತ್ಯ ಪ್ರದರ್ಶಿಸಿದರು.

ಸಂಸದ ರಮೇಶ ಜಿಗಜಿಣಗಿ,
ಶಾಸಕ ಬಸನಗೌಡ ಪಾಟೀಲ ಯತ್ನಾಳ, ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಹರಿ ಗೊಳಸಂಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ ಕುಮಾರ್, ಜಿಲ್ಲಾ ಪಂಚಾಯ್ತಿ ಸಿಇಒ ರಾಹುಲ್ ಶಿಂಧೆ, ಪಾಲಿಕೆ ಆಯುಕ್ತ ವಿಜಯ ಕುಮಾರ್ ಮೆಕ್ಕಳಕಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT