ವಿಜಯಪುರ: ಈ ಮೊದಲು ಪ್ರಕಟಿಸಲಾಗಿದ್ದದ್ವಿತೀಯ ಪಿಯುಸಿ ಫಲಿತಾಂಶವನ್ನು ತಿರಸ್ಕರಿಸಿ ಪರೀಕ್ಷೆ ಬರೆಯುವುದಾಗಿ ಮನವಿ ಮಾಡಿದ್ದ ವಿದ್ಯಾರ್ಥಿಗಳಿಗೆಆಗಸ್ಟ್ 19 ರಿಂದ ಸೆಪ್ಟೆಂಬರ್ 3 ರ ವರೆಗೆ ಪರೀಕ್ಷೆ ನಡೆಲಿದೆ.

ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು 5 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ವಿಜಯಪುರ, ಮುದ್ದೇಬಿಹಾಳ, ಬಸವನಬಾಗೇವಾಡಿ, ಸಿಂದಗಿ ಹಾಗೂ ಇಂಡಿ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 777 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಮಂಗಳವಾರ ನಡೆದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಪೂರ್ವಭಾವಿ ಸಿದ್ದತಾ ಸಭೆಯಲ್ಲಿಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ್ ಕಳಸದ, ಜಿಲ್ಲೆಯಲ್ಲಿ ನಡೆಯಲಿರುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳನ್ನು ಕೋವಿಡ್ ಮಾರ್ಗಸೂಚಿಗಳನ್ವಯ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದರು.

ಪರೀಕ್ಷಾ ಕೇಂದ್ರಗಳನ್ನು ಕಡ್ಡಾಯವಾಗಿ ಸಂಪೂರ್ಣವಾಗಿ ಸ್ಯಾನಿಟೈಸರ್ ಮಾಡಬೇಕು. ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಕೋವಿಡ್ ಲಕ್ಷಣಗಳಾದ ಶೀತ, ಕೆಮ್ಮು, ಜ್ವರ ಕಂಡುಬಂದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಬೇಕು.ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿನ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆಯು ನಕಲು ಮುಕ್ತವಾಗಿ ನಡೆಸಬೇಕು ಮತ್ತು ಐ.ಐ.ಟಿ. ಮಾದರಿಯಲ್ಲಿ ಜಿಲ್ಲೆಯಲ್ಲಿ ಪರೀಕ್ಷೆಗಳು ನಡೆಯಬೇಕು. ಕೇಂದ್ರದ ಮುಖ್ಯ ಅಧೀಕ್ಷಕರು ಮತ್ತು ಸಹ ಮುಖ್ಯ ಅಧೀಕ್ಷಕರು ಜಾಗೃಕತೆಯಿಂದ ಕಾರ್ಯನಿರ್ವಹಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತವಾದ ಬೆಂಚ್ ಮತ್ತು ಡೆಸ್ಕ್‌ಗಳ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಿಕೊಳ್ಳಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಬಲರಾಮ್ ಲಮಾಣಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಿಸಿದ್ದಿ, ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಗಲಿ ಹಾಗೂ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.