ಮಂಗಳವಾರ, ನವೆಂಬರ್ 29, 2022
29 °C

ಮಕ್ಕಳ ಕಳ್ಳನೆಂದು ಮಾನಸಿಕ ಅಸ್ವಸ್ಥನಿಗೆ ಥಳಿಸಿದ ಜನ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ತಿಕೋಟಾ ತಾಲ್ಲೂಕಿನ ಇಟ್ಟಂಗಿಹಾಳ ಗ್ರಾಮದ ಬಳಿ ಸೋಮವಾರ ಸಾರ್ವಜನಿಕರು ಮಕ್ಕಳ ಕಳ್ಳನೆಂದು ಭಾವಿಸಿ ವ್ಯಕ್ತಿಯೊಬ್ಬನನ್ನು ಹಿಡಿದು, ಮರಕ್ಕೆ ಕಟ್ಟಿ ಥಳಿಸಿದ್ದಾರೆ.

ಇಟ್ಟಂಗಿಹಾಳ ಗ್ರಾಮದ ಪೂಜಾರ ವಸತಿ ಬಳಿ ಅಪರಿಚಿತ ಯುವಕನನ್ನು ಹಿಡಿದು ಥಳಿಸಿದ  ಬಳಿಕ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಕುರಿತು ’ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಮ್‌ ಅರಸಿದ್ಧಿ, ಸಾರ್ವಜನಿಕರಿಂದ ಥಳಿತಕ್ಕೆ ಒಳಗಾಗಿರುವ ವ್ಯಕ್ತಿ ಉತ್ತರ ಪ್ರದೇಶ ಮೂಲದವ. ಆತ ಮಾನಸಿಕ ಅಸ್ವಸ್ಥ ಇದ್ದಾನೆ. ಮಾತನಾಡಲು ಅವನಿಗೆ ಸರಿಯಾಗಿ ಬರುವುದಿಲ್ಲ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಮಕ್ಕಳ ಮಕ್ಕಳು ಬಂದಿದ್ದಾರೆ ಎಂಬುದು ಕೇವಲ ವದಂತಿ. ಇಂಥ ಸುಳ್ಳು ಸುದ್ದಿಗಳಿಗೆ ಒಳಗಾಗಿ ಮುಗ್ಧರು, ಅಮಾಯಕರನ್ನು ಥಳಿಸುವುದು ಸರಿಯಲ್ಲ. ಈ ರೀತಿ ಥಳಿಸಿದರೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಥಳಿಸಬಾರದು ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು