ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಕೆ ಚುನಾವಣೆಗೆ ಎಎಪಿ ಸ್ಪರ್ಧೆ: ಬಿರಾದಾರ

Last Updated 22 ಸೆಪ್ಟೆಂಬರ್ 2022, 15:46 IST
ಅಕ್ಷರ ಗಾತ್ರ

ವಿಜಯಪುರ: ಮುಂಬರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲಾ ವಾರ್ಡ್‌ಗಳಿಗೆ ಆಮ್‌ ಆದ್ಮಿ ಪಕ್ಷವು ಸ್ಪರ್ಧಿಸಲಿದೆ ಎಂದು ಪಕ್ಷದ ವಕ್ತಾರ, ನಗರ ಪ್ರಧಾನ ಕಾರ್ಯದರ್ಶಿ ಡಾ.ಬಿ.ಎಂ.ಬಿರಾದಾರ ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯಲ್ಲಿ ಪಕ್ಷವು ನಿರೀಕ್ಷೆಯಂತೆ ಅಧಿಕಾರಕ್ಕೆ ಬಂದರೆ ವಾರ್ಡಿಗೊಂದು ಸರ್ಕಾರಿ ಶಾಲೆ, ವಾರ್ಡಿಗೊಂಡು ಸರ್ಕಾರಿ ಆಸ್ಪತ್ರೆ, ವಾರ್ಡಿಗೊಂದು ಸುಸಜ್ಜಿತ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಆದ್ಯತೆ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಪಾಲಿಕೆ ಚುನಾವಣೆಗೆ ಈಗಾಗಲೇ ಪಕ್ಷವು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಟಿಕೆಟ್‌ ಆಕಾಂಕ್ಷಿಗಳು ಪಕ್ಷದ ಕಚೇರಿಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ ಎಂದರು.

ಜಿಲ್ಲೆಯಲ್ಲಿ ಪಕ್ಷದವು ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿದೆ. ಅನ್ಯ ಪಕ್ಷಗಳ ಅನೇಕ ಮುಖಂಡರು, ಕಾರ್ಯಕರ್ತರು ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗುತ್ತಿದ್ದಾರೆ. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಪಕ್ಷವು ಸ್ಪರ್ಧಿಸಲು ತಯಾರಿ ನಡೆಸಿದೆ ಎಂದು ಹೇಳಿದರು.

ಪಕ್ಷದಿಂದ ಈಗಾಗಲೇ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಗ್ರಾಮ ಜನ ಸಂಪರ್ಕ ಅಭಿಯಾನ ನಡೆಸಲಾಗುತ್ತಿದೆ ಎಂದರು.

ದೇಶದ ನೆಚ್ಚಿನ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್‌ ಅವರ ಜನಪರ ಆಡಳಿತಕ್ಕೆ ಜಿಲ್ಲೆಯ ಜನ ಮೆಚ್ಚಿಕೊಂಡಿದ್ದಾರೆ ಎಂದರು.

ದೇಶದಲ್ಲಿ ಬಿಜೆಪಿ, ಕಾಂಗ್ರೆಸ್‌ ಪಕ್ಷಗಳಿಗೆ ಪರ್ಯಾಯ ಪಕ್ಷವಾಗಿ ಆಮ್‌ ಆದ್ಮಿ ಪಕ್ಷ ಬೆಳೆಯುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT