ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಎಎಪಿ ಬಲಾಡ್ಯ: ಬಿ.ಎಂ.ಬಿರಾದಾರ

Last Updated 27 ನವೆಂಬರ್ 2022, 15:29 IST
ಅಕ್ಷರ ಗಾತ್ರ

ವಿಜಯಪುರ: ಎಎಪಿಆರಂಭವಾಗಿ ಒಂದು ದಶಕವಾಗಿದೆ. ಈಗಾಗಲೇ ಎರಡು ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ದೇಶದಲ್ಲಿ ಬಲಾಡ್ಯ ಪಕ್ಷವಾಗಿ ಹೊರಹೊಮ್ಮಿದೆ. ಭವಿಷ್ಯದಲ್ಲಿ ಇನ್ನಷ್ಟು ಬಲಿಷ್ಠವಾಗಲಿದೆ ಎಂದುಪಕ್ಷದ ಜಿಲ್ಲಾ ವಕ್ತಾರಡಾ.ಬಿ.ಎಂ.ಬಿರಾದಾರ ಹೇಳಿದರು.

ಆಮ್ ಆದ್ಮಿ ಪಕ್ಷದ ಸಂಸ್ಥಾಪನಾ ದಿನ ಅಂಗವಾಗಿ ನಗರದ ದೇವಸ್ಥಾನ ಹಾಗೂ ಮಸೀದಿ, ಮಂದಿರಗಳ ಎದುರುಬಡವರಿಗೆ, ನಿರ್ಗತಿಕರಿಗೆ ಹಾಗೂ ಬಿಕ್ಷುಕರಿಗೆ ಆಹಾರ ವಿತರಣೆ ಮಾಡಿ ಅವರು ಮಾತನಾಡಿದರು.

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ. ಈ ಸಂಬಂಧ ಈಗಾಗಲೇ ಸಿದ್ಧತೆಗಳು ನಡೆದಿವೆ ಎಂದರು.

ಬೇರೆ ಪಕ್ಷಗಳಿಂದ ಅನೇಕ ಮುಖಂಡರು, ಕಾರ್ಯಕರ್ತರು ಎಎಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಪಕ್ಷ ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿದೆ. ವಿಜಯಪುರ ಕ್ಷೇತ್ರದಲ್ಲಿ ಪಕ್ಷದ ಗೆಲುವು ನಿಶ್ಚಿತ ಎಂದು ಅವರು ಅಭಿಪ್ರಾಯಪಟ್ಟರು.

ಆಮ್ ಆದ್ಮಿ ಪಕ್ಷ ಸ್ಥಾಪನೆಯಾಗಿ ಒಂದು ದಶಕ ಪೂರೈಸಿದರಿಂದಪಕ್ಷದ ಕಚೇರಿಯಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಕೇಕ್‌ ಕತ್ತರಿಸಿ ಸಂಭ್ರಮಿಸಿದರು. ರಕ್ತದಾನ ಶಿಬಿರವನ್ನು ಕೂಡ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಡಾ.ಸಾಬೀರ್ ಮೊಮಿನ್ ರಕ್ತದಾನ ಶಿಬಿರ ನಡೆಸಿಕೊಟ್ಟರು.

ಮುಖಂಡರಾದಯೂಸುಪ್ ಜಮಾದಾರ, ಭೋಗೇಶ್‌ ಸೋಲಾಪುರ, ಎ.ಕೆ.ಪಾಟೀಲ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT