ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಆತ್ಮಹತ್ಯೆಗೆ ಪ್ರಚೋದನೆ: ಮೂವರಿಗೆ ಜೈಲು 

Published 21 ನವೆಂಬರ್ 2023, 14:39 IST
Last Updated 21 ನವೆಂಬರ್ 2023, 14:39 IST
ಅಕ್ಷರ ಗಾತ್ರ

ವಿಜಯಪುರ: ನಾಗಠಾಣದ ಶರಣಪ್ಪ ಅರಕೇರಿ ಎಂಬುವವರಿಗೆ 2017ರಲ್ಲಿ ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ ₹ 75 ಸಾವಿರ ದಂಡ ವಿಧಿಸಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ತೀರ್ಪು ನೀಡಿದೆ.

ಆತ್ಮಹತ್ಯೆ ಮಾಡಿಕೊಂಡ ಶರಣಪ್ಪ ಅರಕೇರಿ ಅವರ ಜಮೀನಿಗೆ ಹೊಂದಿಕೊಂಡ ಜಮೀನಿನ ಮಾಲೀಕರಾದ ದುಂಡಪ್ಪ ಗಿರಿಸಾಗರ, ಅಪ್ಪಣ್ಣ ಗಿರಿಸಾಗರ, ಯಲ್ಲವ್ವ ಗಿರಿಸಾಗರ ಅವರ ಮೇಲಿನ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಶಿವಾಜಿ ಅನಂತ ನಾಲವಾಡೆ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ನೀಡಿದ್ದಾರೆ.

ಪ್ರಧಾನ ಸರ್ಕಾರಿ ಅಭಿಯೋಜಕ ಎಸ್.ಎಚ್. ಹಕೀಂ ವಾದ ಮಂಡಿಸಿದ್ದರು. ಪಿಎಸ್‍ಐ ಸುರೇಶ ಆರ್.ಗಡ್ಡಿ ಅವರು ದೋಷಾರೋಪಣೆ ಪತ್ರ ಸಲ್ಲಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT