ವಿಜಯಪುರ: ವಿದ್ಯಾರ್ಥಿನಿಯರನ್ನು ಕರೆದುಕೊಂಡು ಹೋಗಿ ಜನ್ಮದಿನ ಆಚರಿಸಿರುವ ವಿಜಯಪುರದ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಸತಿ ನಿಲಯದ ಹಾಸ್ಟೇಲ್ ಅಡುಗೆ ಸಹಾಯಕರಾದ ರಿಜ್ವಾನ್ ಮುಲ್ಲಾ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಎ.ಬಿ.ವಿ.ಪಿ. ಕಾರ್ಯಕರ್ತರು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತೆದಾರ ಅವರಿಗೆ ಮನವಿ ಸಲ್ಲಿಸಿದರು.

ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಹರ್ಷ ನಾಯಕ ಮಾತನಾಡಿ, ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಜನ್ಮದಿನ ಆಚರಣೆ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಿರುವುದನ್ನು ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದರು.

ಜಿಲ್ಲಾ ಸಂಚಾಲಕ ಸಂದೀಪ ಅರಳಗುಂಡಿ ಮಾತನಾಡಿ, ಬಡ ಪ್ರತಿಭಾವಂತ ವಿದ್ಯಾರ್ಥಿನಿಯರು ಶಿಕ್ಷಣವನ್ನು ಪಡೆದುಕೊಂಡು ತಮ್ಮ ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬುವ ಹಂಬಲದೊಂದಿಗೆ ವಸತಿ ನಿಲಯಗಳಲ್ಲಿ ಇದ್ದು ವಿದ್ಯಾಭ್ಯಾಸ ಮಾಡುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ ವಸತಿ ನಿಲಯಗಳನ್ನು ನೋಡಿಕೊಳ್ಳುವ ವಾರ್ಡನ್ ಮತ್ತು ಅಡುಗೆ ಸಿಬ್ಬಂದಿಯವರು ಈ ರೀತಿಯ ವರ್ತನೆ ಸರಿಯಾದದ್ದಲ್ಲ ಎಂದರು.

ಎಬಿವಿಪಿ ನಗರ ಸಂಘಟನಾ ಕಾರ್ಯದರ್ಶಿ ಶಶಿಕಾಂತ ರಾಕಲೆ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಐಶ್ವರ್ಯ ಆಸಂಗಿ, ಸ್ನೇಹ ಹಿರೇಮಠ, ಪ್ರವೀಣ ಬಿರಾದಾರ, ಚೇತನ ಕೊರವಾರ, ದಾನಮ್ಮ ಹೊಸಮನಿ, ಸುನಿಲ ರಾಠೋಡ, ಬಾಲಾಜಿ ಬಿರಾದಾರ, ವಿದ್ಯಾರ್ಥಿಗಳಾದ ಗಣೇಶ್, ಪ್ರಜ್ವಲ್, ಮನೋಜ್, ಲಕ್ಷ್ಮಿ, ಸಾಕ್ಷಿ, ಪ್ರತೀಕ್ಷಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.