ವಿಜಯಪುರ: ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು, ಪಿಪಿಪಿ ಮಾದರಿ ಕೈ ಬಿಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರನ್ನು ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ನಲ್ಲಿ ತಡೆದು ವಶಕ್ಕೆ ಪಡೆದ ಪೊಲೀಸರು ಬಳಿಕ ಬಿಡುಗಡೆ ಮಾಡಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಜಮಾಯಿಸಿದ ಎಬಿವಿಪಿ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬೇಕೇ ಬೇಕು ಸರ್ಕಾರಿ ಮೆಡಿಕಲ್ ಕಾಲೇಜು ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ ನಡುವೆ ವಾಗ್ವಾದ ನಡೆಯಿತು.

ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ವಿಜಯಪುರ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಮಾಡಲು ಹೊರಟಿರುವುದನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ ಎಂದರು.

ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಈಗಾಗಲೇ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಮಾಡಲು ಬೇಕಿರುವ ಎಲ್ಲ ಮೂಲ ಸೌಲಭ್ಯಗಳು ಇದ್ದರೂ ಸಹಿತ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜಿನ ಸ್ಪಾಪನೆಗೆ ಮುಂದಾಗಿರುವಕ್ಕೆ ಕಾರಣ ಏನು? ಎಂಬುವುದರ ಕುರಿತು ಸ್ಪಷ್ಟನೆ ಇಲ್ಲದಂತಾಗಿದೆ ಎಂದು ಹೇಳಿದರು.

ಗ್ರಾಮೀಣ ಭಾಗದ ಬಡ ಕೂಲಿ ಕಾರ್ಮಿಕರ ಮಕ್ಕಳು ವೈದ್ಯರಾಗಬೇಕು ಎಂಬ ಕನಸನ್ನು ಇಟ್ಟುಕೊಂಡು ವಿದ್ಯಾಭ್ಯಾಸ ಮಾಡುತ್ತಿರುತ್ತಾರೆ. ಆದರೆ, ಲಕ್ಷಾಂತರ ರೂಪಾಯಿ ಹಣವನ್ನು ನೀಡಿ ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಓದಲು ಹಣವನ್ನು ನೀಡುವುದಕ್ಕೆ ಆಗದೆ ಇರುವ ಕಾರಣ ಸಾವಿರಾರು ವಿದ್ಯಾರ್ಥಿಗಳು ವೈದ್ಯರಾಗುವ ಕನಸು ನನಸಾಗುತ್ತಿಲ್ಲ, ಶಿಕ್ಷಣ ಎನ್ನುವುದು ಕೇವಲ ಹಣವಂತರ ಸ್ವತಲ್ಲ, ಅದು ಸರ್ವರಿಗೂ ಸಿಗುವಂತಾಗಬೇಕು, ಅದನ್ನು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ತಲುಪಿಸುವ ಜವಾಬ್ದಾರಿ ಸರ್ಕಾರಗಳದ್ದು, ಆ ಕಾರ್ಯಗಳನ್ನು ಸರ್ಕಾರಗಳು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಆಗ್ರಹಿಸಿದರು.

ಎಬಿವಿಪಿ ಮುಖಂಡ ಹರ್ಷ ನಾಯಕ ಮಾತನಾಡಿ, ವೈದ್ಯರಾಗಬೇಕು ಎನ್ನುವ ಕನಸನ್ನು ಸಾವಿರಾರು ವಿದ್ಯಾರ್ಥಿಗಳು ಇಟ್ಟುಕೊಂಡಿರುತ್ತಾರೆ. ಅವರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿಯ ಮುಖಂಡರಾದ ಸುಜ್ಞಾತಾ ಕುಲಕರ್ಣಿ, ಮಲ್ಲಿಕಾರ್ಜುನ ಮಾಳಿ, ಮಂಜುನಾಥ ಹಳ್ಳಿ ಸಂದೀಪ ಅರಳಗುಂಡಿ, ಶಶಿಕಾಂತ ರಾಕ್ಲೆ, ಐಶ್ವರ್ಯ ಆಸಂಗಿ, ಪ್ರವೀಣ ಬಿರಾದಾರ, ಸ್ನೇಹಾ ಹಿರೇಮಠ, ಚೇತನ ಕೋರವಾರ, ಬಸವರಾಜ ಪೂಜಾರಿ, ಬಾಲಾಜಿ ಬಿರಾದಾರ, ಗೌರೀಶ, ಸುನೀಲ ರಾಠೋಡ, ತ್ರಿಶಲಾ ರಾಠೋಡ, ದಾನಮ್ಮ ಹೊಸಮನಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.