ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸಿಬಿ ಬಲೆಗೆ ಬಿದ್ದ ಗಜಾಕೋಶ

Last Updated 20 ಮೇ 2020, 13:55 IST
ಅಕ್ಷರ ಗಾತ್ರ

ವಿಜಯಪುರ: ವಿದ್ಯುತ್ ಕೇಬಲ್ ಅಳವಡಿಕೆಗೆ ಸಂಬಂಧಪಟ್ಟಂತೆ ₹10 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದ ಇಲ್ಲಿನ ಕೇಂದ್ರ ಬಸ್ ನಿಲ್ದಾಣದ ಸಹಾಯಕ ಸಂಚಾರ ವ್ಯವಸ್ಥಾಪಕ ರಾಜಶೇಖರ ಗಜಾಕೋಶ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.

ಸಿವಿಲ್ ಎಂಜಿನಿಯರ್‌ ಸಂಗಣ್ಣ ಎಂಬುವವರು ವಿದ್ಯುತ್ ಕೇಬಲ್ ಅಳವಡಿಸುವ ಕುರಿತು ಬಸ್‌ ನಿಲ್ದಾಣದ ಆವರಣದಲ್ಲಿ ಅನುಮತಿ ಇಲ್ಲದೇ ಗುಂಡಿ ತೋಡಿದ್ದರು. ಈ ಹಿನ್ನೆಲೆಯಲ್ಲಿ ₹ 20 ಸಾವಿರ ಕೊಡಿದ್ದರೆ ಕ್ರಮಕೈಗೊಳ್ಳುವುದಾಗಿ ಗಜಾಕೋಶ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಕೊನೆಗೆ ₹10 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಎಸಿಬಿ ಡಿವೈಎಸ್‌ಪಿ ಎಲ್.ವೇಣುಗೋಪಾಲ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಪಿಐ ಎಸ್.ಆರ್.ಗಣಾಚಾರಿ, ಹರಿಶ್ಚಂದ್ರ ಹಾಗೂ ಸಿಬ್ಬಂದಿ ಮಹೇಶ ಪೂಜಾರಿ, ಅಶೋಕ ಸಿಂಧೂರ, ಸುರೇಶ ಜಾಲಗೇರಿ, ಮದನಸಿಂಗ್‌ ರಜಪೂತ, ಈರಣ್ಣ ಕನ್ನೂರ, ಸದಾಶಿವ ಕೋಟ್ಯಾಳ, ಚನ್ನನಗೌಡ ಯಾಳವಾರ, ಮಾಳಪ್ಪ ಸಲಗೊಂಡ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT