ಗುರುವಾರ , ಜನವರಿ 28, 2021
15 °C

ಕಾರು ಅಪಘಾತ: ಇಬ್ಬರಿಗೆ ಗಂಭೀರ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲ್ಹಾರ: ಕಾರು ರಸ್ತೆ ಪಕ್ಕದ ಸೇತುವೆ ಗೋಡೆಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗ್ರಾ.ಪಂ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿ ಸೇರಿ ಇಬ್ಬರು ಗಾಯಗೊಂಡ ಘಟನೆ ತಾಲ್ಲೂಕಿನ ಕೂಡಗಿ ತಾಂಡಾ ಬಳಿ ಬುಧವಾರ ಸಂಭವಿಸಿದೆ.

ತಾಲ್ಲೂಕಿನ ತಳೇವಾಡ ಗ್ರಾ.ಪಂ 4ನೇ ವಾರ್ಡಿನಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿ ಸಿದಪ್ಪ ಬಮರಡ್ಡಿ ಹಾಗೂ ಬಾಬು ಬೆಲ್ಲದ ಗಾಯಗೊಂಡವರು. ಇಬ್ಬರು ಬುಧವಾರ ಮಧ್ಯಾಹ್ನ ತಳೇವಾಡ ಸಮೀಪದ ಕೂಡಗಿ ತಾಂಡಾ ಬಳಿ ಕಾರಿನಲ್ಲಿ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು