ವಿಜಯಪುರ:ನಗರದ ಭೂತನಾಳ ಹತ್ತಿರ ನಿರ್ಮಾಣದ ಹಂತದಲ್ಲಿರುವ ಸೈಕ್ಲಿಂಗ್ ವೆಲೊಡ್ರಮ್ ಕಾಮಗಾರಿಯನ್ನು ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಪರಿಶೀಲಿಸಿದರು.
ಸೈಕ್ಲಿಂಗ್ ವೆಲೊಡ್ರಮ್ ಕಾಮಗಾರಿ ಪುನರ್ ಪ್ರಾರಂಭಿಸಲು ಸೈಕ್ಲಿಂಗ್ ಫೆಡರೇಷನ್ ಆಫ್ ಇಂಡಿಯಾದ ನುರಿತ ತಜ್ಞರನ್ನು ಕರೆಯಿಸಿ, ಸೂಕ್ತ ತಾಂತ್ರಿಕ ಸಲಹೆ ಪಡೆದು ಕಾಮಗಾರಿ ಪ್ರಾರಂಭಿಸುವ ಕುರಿತು ಚರ್ಚೆ ನಡೆಸಿದರು.
2018 ಫೆಬ್ರುವರಿಯಲ್ಲಿ ತಾಂತ್ರಿಕ ದೋಷಗಳಿಂದ ಕಾಮಗಾರಿ ಸ್ಥಗಿತಗೊಂಡಿದ್ದು, ಪುನರ್ ಪ್ರಾರಂಭಿಸಲು ಬೇಕಾದ ವ್ಯವಸ್ಥಿತವಾದ ಕಾರ್ಯ ಯೋಜನೆ ರೂಪಿಸಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಸೈಕ್ಲಿಂಗ್ ಸಂಸ್ಥೆಯ ಅಧ್ಯಕ್ಷ ರಾಜು ಬಿರಾದಾರ, ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹರೀಶ್, ಕ್ರೀಡಾ ಇಲಾಖೆಸಹಾಯಕ ನಿರ್ದೇಶಕ ಎಸ್.ಜಿ.ಲೋಣಿ, ಸೈಕ್ಲಿಂಗ್ ತರಬೇತಿದಾರರಾದ ಅಲಕಾ ಪಡತಾರೆ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.