ವಿಜಯಪುರ: ಚಿತ್ರನಟಿ ತಾರಾ ಅನುರಾಧ, ಮಹಿಳಾ ಪರ ಹೋರಾಟಗಾರ್ತಿ ಕಲಬುರ್ಗಿಯ ಮೀನಾಕ್ಷಿ ಬಾಳಿ ಹಾಗೂ ಶಿಗ್ಗಾವಿಯ ಉತ್ಸವ ರಾಕ್ ಗಾರ್ಡನ್ ನಿರ್ವಾಹಕಿ ವೇದರಾಣಿ ದಾಸನೂರು ಅವರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಕುಲಪತಿ ಪ್ರೊ. ತುಳಸಿಮಾಲಾ ತಿಳಿಸಿದರು.

ಜನವರಿ 9ರಂದು ಮಧ್ಯಾಹ್ನ 12.30ಕ್ಕೆ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ 16ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ ಎಂದರು.

ವಿಶ್ವವಿದ್ಯಾಲಯದಿಂದ ವಿವಿಧ ಸ್ನಾತಕ, ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ತೇರ್ಗಡೆಯಾದ ಒಟ್ಟು 63 ವಿದ್ಯಾರ್ಥಿನಿಯರಿಗೆ 80 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುವುದು ಎಂದರು.

ಘಟಿಕೋತ್ಸವದಲ್ಲಿ 13,461 ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಪದವಿ ಪಡೆಯಲು ಅರ್ಹರಾಗಿರುತ್ತಾರೆ ಎಂದರು.

ಘಟಿಕೋತ್ಸವದಲ್ಲಿ ಒಟ್ಟು 34 ವಿದ್ಯಾರ್ಥಿನಿಯರಿಗೆ ಪಿ.ಎಚ್ ಡಿ, ಒಟ್ಟು 1,106 ವಿದ್ಯಾರ್ಥಿನಿಯರಿಗೆ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ನೀಡಲಾಗುವುದು ಎಂದರು.

ಈ ಘಟಿಕೋತ್ಸವದಲ್ಲಿ ಒಟ್ಟು 12, 350 ವಿದ್ಯಾರ್ಥಿನಿಯರಿಗೆ ಸ್ನಾತಕ ಪದವಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯ ಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಘಟಿಕೋತ್ಸವ ಸಂಯೋಜನಾಧಿಕಾರಿ ಪ್ರೊ. ಸಕ್ಪಾಲ್ ಹೂವಣ್ಣ, ಪ್ರೊ.ಓಂಕಾರ ಕಾಕಡೆ, ಡಾ.ತಹಮೀನಾ ಕೋಲಾರ, ಸಂದೀಪ ನಾಯಕ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.