ವಿಜಯಪುರ: ‘ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ನಮ್ಮ ವಿಜಯಪುರಕ್ಕೆ ಆಗಮಿಸಿ, ಈ ನೆಲವನ್ನು ಪವಿತ್ರಗೊಳಿಸಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಈ ಭೀಮ ಗಾಯನ ಕಾರ್ಯಕ್ರಮ ಆಯೋಜಿಸಿದ್ದು, ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭೀಮ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಲಾವಿದರು ಪ್ರಸ್ತುತ ಪಡಿಸುವ ಭೀಮ ಗೀತೆಗಳ ಗುಚ್ಛ ಕಾರ್ಯಕ್ರಮದ ಮೂಲಕ ಡಾ. ಅಂಬೇಡ್ಕರ್ ಜೀವನ ಹಾಗೂ ಅವರ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಪ್ರಸ್ತುತಿಯೊಂದಿಗೆ ಹರಿದು ಬರಲಿರುವ ಗಾನ ಸುಧೆಯೊಂದಿಗೆ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಮತ್ತೆ ಮತ್ತೆ ಸ್ಮರಿಸೋಣ. ಅವರ ಆದರ್ಶದ ಬದುಕನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು.

ಜತೆಗೆ ಆ ಸಂಗೀತದ ಮೂಲಕ ಹೊರಹೊಮ್ಮುವ ಸ್ವರಗಳನ್ನು ಆಲಿಸುವುದರೊಂದಿಗೆ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಸಲಹೆ ಮಾಡಿದರು.

ಪಶು ವೈದ್ಯಕೀಯ ಇಲಾಖೆ ಉಪನಿರ್ದೆಶಕ ಡಾ. ಅಶೋಕ ಘೊಣಸಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲಿಕ ಮಾನವರ, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಂ. ಎಸ್. ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಭೋವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ರಾಜು ಕೂಚಬಾಳ, ಪೀರಪ್ಪ ನಡುವಿನಮನಿ,
ಸುರೇಶ ಘೊಣಸಗಿ, ಭೀಮರಾಯ ಜಿಗಜಿಣಗಿ, ಅಡಿವೆಪ್ಪ ಸಾಲಗಲ್, ವಿದ್ಯಾವತಿ ಅಂಕಲಗಿ, ಚನ್ನು ಕಟ್ಟಿಮನಿ ಇದ್ದರು.

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವೇದಿಕೆಯಲ್ಲಿದ್ದ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿದರು.

ಬಳಿಕ ಡಾ.ಅಂಬೇಡ್ಕರ್ ಜೀವನ ಸಾಧನೆ, ಸಮಾನತೆಯ ಹೋರಾಟ, ಅಸ್ಪಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ಕಾರ್ಯಕ್ರಮವನ್ನು ಕಲಾವಿದರು ಪ್ರಸ್ತುತಪಡಿಸಿದರು. ರಂಗಮಂದಿರದಲ್ಲಿ ನಡೆದ ಭೀಮ ಗಾಯನ ಕಾರ್ಯಕ್ರಮವನ್ನು ಸಾರ್ವಜನಿಕರು ಆಸ್ವಾಧಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ಸಂತೋಷ ಭೋವಿ ಸಂವಿಧಾನ ಪೀಠಿಕೆ ಬೋಧಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.