ಸೋಮವಾರ, ಮಾರ್ಚ್ 1, 2021
30 °C
ಕೃತಕ ಬುದ್ಧಿಮತ್ತೆ ಮತ್ತು ಮಾಧ್ಯಮ ಕಾರ್ಯಾಗಾರಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಚಾಲನೆ

ಕೃತಕ ಬುದ್ಧಿಮತ್ತೆ ಸರಿಯಾದ ಬಳಕೆಗೆ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ‘ಕೃತಕ ಬುದ್ಧಿಮತ್ತೆಯು ಮಾಧ್ಯಮ ಕ್ಷೇತ್ರದ ಪ್ರತಿಯೊಂದು ಹಂತದ ಮೇಲೆಯೂ ಪರಿಣಾಮ ಬೀರುತ್ತಿದ್ದು, ಈ ಕುರಿತು ಪತ್ರಕರ್ತರು ಉಪಯುಕ್ತ ಮಾಹಿತಿ ಪಡೆಯುವುದು ಅತ್ಯವಶ್ಯ’ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ನವದೆಹಲಿಯ ಡಿಎಸ್‍ಟಿ ಕ್ಯೂರಿ-ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಸಹಯೋಗದಲ್ಲಿ  ‘ಕೃತಕ ಬುದ್ಧಿಮತ್ತೆ ಮತ್ತು ಮಾಧ್ಯಮ’ ಎಂಬ ವಿಷಯದ ಕುರಿತು ಆಯೋಜಿಸಿರುವ ರಾಷ್ಟ್ರೀಯ ಕಾರ್ಯಾಗಾರವನ್ನು (ಆನ್‍ಲೈನ್) ಉದ್ಘಾಟಿಸಿ ಅವರು ಮಾತನಾಡಿದರು.

‘ಕೃತಕ ಬುದ್ಧಿಮತ್ತೆಯು ಪತ್ರಕರ್ತರ ಸೃಜನಶಿಲತೆ ಮತ್ತು ವಿಷಯದ ಕುರಿತು ಅವರಿಗಿರುವ ಕುತೂಹಲತೆಯನ್ನು ಹೆಚ್ಚಿಸುವಲ್ಲಿ ಸಹಾಯಕಾರಿಯಾಗಿದೆ’ ಎಂದರು.

ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ ವಿಭಾಗದ ಐಸಿಎಸ್‍ಎಸ್‍ಆರ್ ಸಿನಿಯರ್ ಫೆಲೋ ಪ್ರೊ.ಎ.ಎಸ್.ಬಾಲಸುಬ್ರಮಣ್ಯ ಮಾತನಾಡಿ, ‘ತಂತ್ರಜ್ಞಾನದ ಆವಿಷ್ಕಾರದಿಂದಾಗಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾದವು. ಪ್ರಸ್ತುತ ಕೃತಕ ಬುದ್ಧಿಮತ್ತೆಯು ಪತ್ರಕರ್ತರ ಕೆಲಸವನ್ನು ಸುಲಭಗೊಳಿಸಿದ್ದು, ಜೊತೆಗೆ ಅವರ ಕಾರ್ಯಕ್ಷಮತೆಯನ್ನು ಉತ್ತಮಗೊಳಿಸುವಲ್ಲಿ ಸಹಾಯಕಾರಿಯಾಗಿದೆ’ ಎಂದರು.

ಕೋಲ್ಕತ್ತಾ ಸುರೇಂದ್ರನಾಥ ಮಹಿಳಾ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಡಾ.ಉಮಾ ಶಂಕರ ಪಾಂಡೆ ಮಾತನಾಡಿದರು.

ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲಾ ಮಾತನಾಡಿ, ‘ಕೃತಕ ಬುದ್ಧಿಮತ್ತೆಯು ಪತ್ರಕರ್ತರ ಸಮಯ ಮತ್ತು ಕಾರ್ಯವನ್ನು ಸರಳಗೊಳಿಸಲು ಉಪಯುಕ್ತವಾಗಿದೆ’ ಎಂದರು.

‘ಆದರೆ, ಈ ಕೃತಕ ಬುದ್ಧಿಮತ್ತೆಯನ್ನು ಸರಿಯಾದ ರೀತಿ ಬಳಸುವಲ್ಲಿ ಪತ್ರಕರ್ತರಿಗೆ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಅವುಗಳನ್ನು ಎದುರಿಸಿ ಮುನ್ನಡೆದಾಗ ಮಾತ್ರ ಒದುಗರಿಗೆ ಉಪಯುಕ್ತ ಮಾಹಿತಿ ನೀಡಲು ಸಾಧ್ಯ’ ಎಂದು ಅವರು ಹೇಳಿದರು.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರಗೌಡ ಕಾಕಡೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಡಿಎಸ್‍ಟಿ ಕ್ಯೂರಿ-ಎಐನ ಸಂಯೋಜಕ ಪ್ರೊ.ಅಜೀಜ್ ಮಕಾನದಾರ್, ತಾಂತ್ರಿಕ ಸಂಯೋಜಕ ಸಂದೀಪ್ ನಾಯಕ್, ಕಾರ್ಯಕ್ರಮ ಸಂಯೋಜಕಿ ಡಾ. ತಹಮೀನಾ ಕೋಲಾರ ಉಪಸ್ಥಿತರಿದ್ದರು.

ದೇಶದ ವಿವಿಧ ವಿಶ್ವವಿದ್ಯಾಲಯಗಳ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಆನ್‍ಲೈನ್ ಮೂಲಕ ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

****

ಮುಂಬರುವ ಯುವ ಪೀಳಿಗೆ ಕೃತಕ ಬುದ್ಧಿಮತ್ತೆಯ ಸಾಮರ್ಥ್ಯವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು
-ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಉಪಮುಖ್ಯಮಂತ್ರಿ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು