ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಐಹೊಳ್ಳಿ ಆಯ್ಕೆ

Published 14 ಮಾರ್ಚ್ 2024, 15:01 IST
Last Updated 14 ಮಾರ್ಚ್ 2024, 15:01 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಜರುಗಿದ ಕಾರ್ಯಕಾರಿ ಸಭೆಯಲ್ಲಿ 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ವಿ.ಡಿ.ಐಹೊಳ್ಳಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ‘ಮಾರ್ಚ್‌ 23 ಮತ್ತು 24ರಂದು ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಜಿಲ್ಲಾ ಸಮ್ಮೇಳನ ನಡೆಯಿಸಲು ತಿರ್ಮಾನಿಸಲಾಗಿದೆ’ ಎಂದು ಹೇಳಿದರು.

ಗೌರವಾಧ್ಯಕ್ಷೆ ಭಾರತಿ ಪಾಟೀಲ, ಕೋಶಾಧ್ಯಕ್ಷ ಸಂಗಮೇಶ ಮೇತ್ರಿ, ಗೌರವ ಕಾರ್ಯದರ್ಶಿ ಸುಭಾಸಚಂದ್ರ ಕನ್ನೂರ, ಮಾಧವ ಗುಡಿ, ಪದಾಧಿಕಾರಿಗಳಾದ ಅಭಿಷೇಕ ಚಕ್ರವರ್ತಿ, ಮಹ್ಮದ್ ಗೌಸ್ ಹವಾಲ್ದಾರ್, ರಾಜಾಸಾಬ ಶಿವನಗುತ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT