ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣ ಕನಸು; ಬಿಜೆಪಿಯಿಂದ ನನಸು

ವಿಜಯಪುರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಆರ್‌.ಎಸ್‌.ಪಾಟೀಲ ಕುಚಬಾಳ
Last Updated 12 ಫೆಬ್ರುವರಿ 2021, 15:16 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯ ಜನರ ಬಹುದಿನಗಳ ವಿಮಾನ ನಿಲ್ದಾಣ ನಿರ್ಮಾಣ ಕನಸು ರಾಜ್ಯ ಸರ್ಕಾರದಿಂದ ನನಸಾಗುತ್ತಿದೆ ಎಂದುಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಎಸ್‌.ಪಾಟೀಲ ಕುಚಬಾಳ ತಿಳಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿರುವುದರಿಂದ ಭವಿಷ್ಯದಲ್ಲಿ ಪ್ರವಾಸೊದ್ಯಮ, ವಾಣಿಜ್ಯೋದ್ಯಮ ಮತ್ತು ಕೈಗಾರಿಕೋದ್ಯಮದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ವಿಜಯಪುರ ತಾಲ್ಲೂಕಿನ ಮದಭಾವಿ ಮತ್ತು ಬುರಣಾಪುರ ಗ್ರಾಮಗಳ ಮಧ್ಯದಲ್ಲಿ 727 ಎಕರೆ ಜಾಗದಲ್ಲಿ ಒಟ್ಟು ₹220 ಕೋಟಿ ಮೊತ್ತದಲ್ಲಿ ಎರಡು ಹಂತಗಳಲ್ಲಿವಿಮಾನ ನಿಲ್ದಾಣ ಕಾಮಗಾರಿ ನಡೆಯಲಿದೆ ಎಂದರು.

ಉದ್ದೇಶಿತ ವಿಮಾನ ನಿಲ್ದಾಣ ಕಾಮಗಾರಿಗೆ ಫೆ.15ರಂದು ಬೆಳಿಗ್ಗೆ 11ಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶಿವಮೊಗ್ಗದಿಂದ ವರ್ಚುವಲ್‌ ಮೂಲಕ ಚಾಲನೆ ನೀಡಲಿದ್ದಾರೆ ಎಂದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸೇರಿದಂತೆ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಜಿಲ್ಲೆಯ ದ್ರಾಕ್ಷಿ, ಲಿಂಬೆ ಬೆಳೆಗಾರರು, ಕೈಗಾರಿಕೋದ್ಯಮಿಗಳು, ವ್ಯಾಪಾರಸ್ಥರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಬಿಜೆಪಿ ಜಿಲ್ಲಾ ಘಟಕದ ಉಮೇಶ ಕಾರಜೋಳ, ಮಲ್ಲಿಕಾರ್ಜುನ, ವಿವೇಕಾನಂದ ಡಬ್ಬಿ, ಬಸವರಾಜ ಬೈಚಬಾಳ, ವಿಜಯ ಜೋಶಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT