ವಿಜಯಪುರ: ಇಲ್ಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ಗೆ ಧಾರವಾಡದ ಪಾರ್ವತೆವ್ವ ಹೊಂಗಲ್(ಜಾನಪದ), ಕಲಬುರಗಿಯ ಡಾ.ಸಂಗೀತಾ ಎನ್. ಕಟ್ಟಿಮನಿ (ಸಾಹಿತ್ಯ ಮತ್ತು ಶಿಕ್ಷಣ) ಹಾಗೂ ಬಾಗಲಕೋಟೆ ಜಿಲ್ಲೆ ಜಮಖಂಡಿಯ ಆಶಾದೇವಿ ಗುಡಗುಂಟಿ (ಉದ್ಯಮ ಮತ್ತು ಸಾಮಾಜಿಕ ಸೇವೆ) ಭಾಜನವಾಗಿದ್ದಾರೆ.

ಏಪ್ರಿಲ್ 21ರಂದು ಬೆಳಿಗ್ಗೆ 11.30ಕ್ಕೆ ವಿಶ್ವವಿದ್ಯಾಲಯದ ಜ್ಞಾನಶಕ್ತಿ ಆವರಣದಲ್ಲಿ ನಡೆಯುವ 17ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮೂವರು ಮಹಿಳಾ ಸಾಧಕಿಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

58 ಚಿನ್ನದ ಪದಕ:

ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ತೇರ್ಗಡೆಯಾದ ಒಟ್ಟು 70 ವಿದ್ಯಾರ್ಥಿನಿಯರಿಗೆ 58 ಚಿನ್ನದ ಪದಕ ಮತ್ತು 12 ನಗದು ಪಾರಿತೋಷಕ ಪದಕಗಳನ್ನು ರಾಜ್ಯಪಾಲರು ಘಟಿಕೋತ್ಸವದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು.

ಈ ಘಟಿಕೋತ್ಸವದಲ್ಲಿ ಒಟ್ಟು 13,441 ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಪದವಿ ಪಡೆಯಲು ಅರ್ಹರಾಗಿರುತ್ತಾರೆ ಹಾಗೂ 86 ವಿದ್ಯಾರ್ಥಿನಿಯರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.