ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲಮಟ್ಟಿ ಜಲಾಶಯ: 4 ಟಿಎಂಸಿ ಅಡಿ ನೀರು ಬಿಡುಗಡೆ ಇಂದಿನಿಂದ

Published 6 ಮಾರ್ಚ್ 2024, 0:54 IST
Last Updated 6 ಮಾರ್ಚ್ 2024, 0:54 IST
ಅಕ್ಷರ ಗಾತ್ರ

ಆಲಮಟ್ಟಿ: ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶದ ಮೇರೆಗೆ ಕುಡಿಯುವ ನೀರಿ‌ನ ಉದ್ದೇಶಕ್ಕಾಗಿ ಆಲಮಟ್ಟಿ ಜಲಾಶಯದಿಂದ ಮಾರ್ಚ್‌ 6ರಿಂದ ಕೃಷ್ಣಾ ನದಿಗೆ ನೀರು ಬಿಡಲಾಗುತ್ತದೆ.

ಬೆಳಿಗ್ಗೆ 5000 ಕ್ಯೂಸೆಕ್ ನೀರನ್ನು ನದಿ ಪಾತ್ರಕ್ಕೆ ಹರಿಸಿ ನಂತರ ಅದನ್ನು 10,000 ಕ್ಯೂಸೆಕ್‌ಗೆ ಹೆಚ್ವಿಸಲಾಗುತ್ತದೆ. ಕೃಷ್ಣಾ ನದಿ ಪಾತ್ರದ ಜನತೆ ಎಚ್ಚರದಿಂದಿರಲು ಸೂಚಿಸಲಾಗಿದೆ.

4 ಟಿಎಂಸಿ ಅಡಿ ನೀರು: ಕುಡಿಯುವ ನೀರಿನ ಉದ್ದೇಶಕ್ಕಾಗಿ ಒಟ್ಟಾರೆ 4 ಟಿಎಂಸಿ ಅಡಿ ನೀರನ್ನು ಹರಿಸಲಾಗುತ್ತದೆ. ಮಾರ್ಚ್‌ 6ರ ಬೆಳಿಗ್ಗೆ 8ಕ್ಕೆ ಜಲಾಶಯದ ಬಲಭಾಗದ ವಿದ್ಯುತ್ ಉತ್ಪಾದನಾ ಕೇಂದ್ರದ ಮೂಲಕ ನೀರನ್ನು ಹರಿಸಲಾಗುತ್ತದೆ ಎಂದು ಎಂಜಿನಿಯರ್ ಡಿ.ಬಸವರಾಜ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT