ಬುಧವಾರ, ಆಗಸ್ಟ್ 12, 2020
27 °C

ಆಲಮಟ್ಟಿ ಜಲಾಶಯ: 45 ಸಾವಿರ ಕ್ಯುಸೆಕ್ ನೀರು ಹೊರಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಆಲಮಟ್ಟಿ ಜಲಾಶಯದ ಹೊರಹರಿವು ಭಾನುವಾರ ಬೆಳಿಗ್ಗೆಯಿಂದ 45 ಸಾವಿರ ಕ್ಯುಸೆಕ್‌ಗೆ ಹೆಚ್ಚಿಸಲಾಗಿದೆ. ಜಲಾಶಯದ ಮುಂಭಾಗದ ನದಿ ತೀರದ ಗ್ರಾಮಗಳಿಗೆ ಆಯಾ ತಾಲ್ಲೂಕು ಆಡಳಿತದ ಮೂಲಕ ನದಿ ತೀರಕ್ಕೆ ಹೋಗದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಮಹಾರಾಷ್ಟ್ರದಲ್ಲಿ ಮಳೆಯ‌ ಅಬ್ಬರ ತಗ್ಗಿದ್ದು ಒಳಹರಿವು ಕೊಂಚ ಕಡಿಮೆಯಾಗಿದೆ. ಭಾನುವಾರ 69,868 ಕ್ಯುಸೆಕ್ (6 ಟಿಎಂಸಿ ಅಡಿ) ನೀರು ಹರಿದು ಬಂದಿದೆ.

ಜಲಾಶಯ ಭರ್ತಿಗೆ ಎರಡು ಮೀಟರ್ ಬಾಕಿ:

ಜಲಾಶಯದ ಹೊರಹರಿವು ಸ್ಥಗಿತಗೊಳಿಸಿದ್ದರೆ ಜಲಾಶಯ ಬಹುತೇಕ ಭರ್ತಿಯಾಗಿರುತ್ತಿತ್ತು. ಆದರೆ ಜಲಾಶಯದ ಪ್ರವಾಹ ನಿಯಂತ್ರಣಕ್ಕಾಗಿ ಜಲಾಶಯವನ್ನು ಭರ್ತಿ ಮಾಡದೇ ಸುರಕ್ಷಿತ ಅಂತರ ಕಾಪಾಡಲಾಗುತ್ತದೆ. 519.60 ಮೀಟರ್‌ ಗರಿಷ್ಠ ಎತ್ತರದ ಜಲಾಶಯದಲ್ಲಿ 517.58 ಮೀಟರ್‌ ವರೆಗೆ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ ಸದ್ಯ 92 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

ಜಲಾಶಯದ ಬಲಭಾಗದ ಕೆಪಿಸಿಎಲ್ ಮೂಲಕ 45 ಸಾವಿರ ಕ್ಯುಸೆಕ್ ನೀರು ಹರಿಸುತ್ತಿರುವ ಕಾರಣ ಜಲಾಶಯದ ಎಲ್ಲಾ ಘಟಕಗಳು ಕಾರ್ಯಾರಂಭ ಮಾಡಿದ್ದು 255 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ಕೆಪಿಸಿಎಲ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು