ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಆಲಮಟ್ಟಿ ಜಲಾಶಯದಿಂದ 1.50 ಲಕ್ಷ ಕ್ಯುಸೆಕ್ ನೀರು ಹೊರಕ್ಕೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಆಲಮಟ್ಟಿ ಜಲಾಶಯಕ್ಕೆ ಶುಕ್ರವಾರ ಒಳಹರಿವಿನಲ್ಲಿ ಏರಿಕೆಯಾಗಿದ್ದರಿಂದ ಜಲಾಶಯದ ಎಲ್ಲಾ 26 ಗೇಟ್‌ಗಳ ಮೂಲಕ ಹಾಗೂ ಆಲಮಟ್ಟಿ ವಿದ್ಯುತ್ ಉತ್ಪಾದನಾ ಕೇಂದ್ರದ ಮೂಲಕ 1.50 ಲಕ್ಷ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ಕಣಿವೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಒಳಹರಿವು ಹೆಚ್ಚಿದೆ. ಗುರುವಾರ ಒಂದು ಲಕ್ಷ ಕ್ಯುಸೆಕ್ ಇದ್ದ ಒಳಹರಿವು ಶುಕ್ರವಾರ 1,26,374 ಕ್ಯುಸೆಕ್‌ಗೆ ಏರಿಕೆಯಾಗಿದೆ. 

ಇದಕ್ಕೂ ಹೆಚ್ಚಿನ ಪ್ರಮಾಣದಲ್ಲಿ ನಾರಾಯಣಪುರ ಜಲಾಶಯದಿಂದಲೂ ನೀರು ಬಿಡಲಾಗುತ್ತಿದೆ. ಆಲಮಟ್ಟಿ ಜಲಾಶಯದ ಮುಂಭಾಗದಲ್ಲಿ ಸದ್ಯಕ್ಕೆ ಪ್ರವಾಹದ ಸ್ಥಿತಿಯಿಲ್ಲ ಎಂದು ಕೆಬಿಜೆಎನ್‌ಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಗೇಟ್‌ಗಳನ್ನು‌ ಮುಚ್ಚಿದ್ದರೆ ಜಲಾಶಯ ಗುರುವಾರವೇ ಭರ್ತಿಯಾಗುತ್ತಿತ್ತು. ಆದರೆ ಪ್ರವಾಹದ ಮುನ್ಸೂಚನೆ ಹಿನ್ನಲೆಯಲ್ಲಿ ಹೆಚ್ಚು ನೀರನ್ನು ಬಿಡಲಾಗುತ್ತಿದೆ. ಕಳೆದ ನಾಲ್ಕು ದಿನಗಳಿಂದ ಮಹಾರಾಷ್ಟ್ರದಲ್ಲಿದ್ದ ಮಳೆಯ ಅಬ್ಬರ ಶುಕ್ರವಾರ ಅಲ್ಪ ತಗ್ಗಿದೆ ಎಂದು ಮೂಲಗಳು ತಿಳಿಸಿವೆ.

519.60 ಮೀ ಗರಿಷ್ಠ ಸಂಗ್ರಹ ಸಾಮರ್ಥ್ಯ ದ ಜಲಾಶಯದಲ್ಲಿ ಸದ್ಯ 517.96 ಮೀ. ವರೆಗೆ ನೀರು ಸಂಗ್ರಹವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು