ಆಲಮೇಲ: ತಾಲ್ಲೂಕಿನ ಕಡಣಿಯ ಬೆರಗು ಪ್ರಕಾಶನ ಸಂಸ್ಥೆಯು ನೀಡುವ ರಾಜ್ಯಮಟ್ಟದ ಪ್ರೊ.ಎಚ್.ಟಿ.ಪೋತೆ ಹಸ್ತಪ್ರತಿ ಪ್ರಶಸ್ತಿಗೆ ಕಥಾ ವಿಭಾಗದಲ್ಲಿ ಡಾ.ಲಕ್ಷ್ಮಣ ವಿ.ಎ ಅವರ ‘ಜಿರಿ ಮಳೆಯ ಕಣ್ಣು’. ಕಾವ್ಯ ಹಸ್ತಪ್ರತಿ ವಿಭಾಗದಲ್ಲಿ ಬೆಂಗಳೂರಿನ ಭಾಗ್ಯವಸು ಅವರ ‘ರೆಪ್ಪೆಗಂಬದ ಮೇಲೆ ಕೂತ ಮರಿ ಹಕ್ಕಿ’ ಆಯ್ಕೆಯಾಗಿದೆ.

ದಿ.ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ 2023ರ ಸಾಲಿನ ಪುಸ್ತಕ ಪ್ರಶಸ್ತಿಗೆ ದಾವಣಗೆರೆಯ ಮಲ್ಲಿಕಾರ್ಜುನ ಕಡಕೋಳ ಅವರ ‘ಪರಿಮಳದ ಹಾದಿಯ ಪಯಣಿಗರು’ ಕೃತಿ ಆಯ್ಕೆಯಾಗಿದೆ ಎಂದು ಬೆರಗು ಪ್ರಕಾಶನದ ಪ್ರಕಾಶಕಿ ವಿಜಯಲಕ್ಷ್ಮಿ ಆರ್.ಕತ್ತಿ ತಿಳಿಸಿದ್ದಾರೆ.

ಯುವಕವಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ಯುವ ಕಾವ್ಯ ಪುರಸ್ಕಾರ’ ನೀಡಲು ನಿರ್ಧರಿಸಿದ್ದು, ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಪಿ.ನಂದಕುಮಾರ ಅವರ ‘ಹಂಗಿನ ಕಿರೀಟಕ್ಕೆ ಜೋತು ಬಿದ್ದ ನಾಲಿಗೆ’ ಹಸ್ತಪ್ರತಿ ಆಯ್ಕೆಯಾಗಿದೆ.

ಬೆರಗು ಪ್ರಕಾಶನವು ಕಳೆದ ಐದು ವರ್ಷಗಳಿಂದಲೂ ಪ್ರಶಸ್ತಿ ನೀಡುತ್ತಾ ಬಂದಿದ್ದು. ಪ್ರಸಕ್ತ ವರ್ಷದ ಪ್ರಶಸ್ತಿಗೆ 157 ಪುಸ್ತಕಗಳು, ಹಾಗೂ ಹಸ್ತಪ್ರತಿ ಸ್ಪರ್ಧೆಗೆ 74 ಹಸ್ತಪ್ರತಿಗಳು ಬಂದಿದ್ದವು. ಕವಿ, ಕತೆಗಾರ ವಾಸುದೇವ ನಾಡಿಗ ಹಾಗೂ ಗುಲಬರ್ಗಾ ವಿವಿಯ ಡಾ.ಎಂ.ಬಿ.ಕಟ್ಟಿ ಅವರು ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದ್ದರು.

ಹಸ್ತಪ್ರತಿ ಪ್ರಶಸ್ತಿಯು ಹತ್ತು ಸಾವಿರ ನಗದು ಹಾಗೂ ಪುಸ್ತಕ ಪ್ರಶಸ್ತಿಯು ಐದು ಸಾವಿರ ನಗದು. ಇವೆರೆಡೂ ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿವೆ. ಬೆರಗು ಪ್ರಕಾಶನವು ಹಸ್ತಪ್ರತಿಯನ್ನು ಪ್ರಕಟಿಸಲಿದೆ. ನವೆಂಬರ್ನಲ್ಲಿ ಕಡಣಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.