ಗುರುವಾರ , ಜೂನ್ 17, 2021
27 °C

ಆಲಮಟ್ಟಿ ಜಲಾಶಯ: ಒಂದೇ ದಿನ 21 ಟಿಎಂಸಿ ಅಡಿ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆಲಮಟ್ಟಿ (ವಿಜಯಪುರ): ಆಲಮಟ್ಟಿ ಜಲಾಶಯಕ್ಕೆ ಗುರುವಾರ ಒಂದೇ ದಿನ 2,41,714 ಕ್ಯುಸೆಕ್ (ಅಂದಾಜು 20.9 ಟಿಎಂಸಿ ಅಡಿ) ನೀರು ಹರಿದು ಬಂದಿದೆ. ಇದು ಈ ವರ್ಷದ ಗರಿಷ್ಠ ಒಳಹರಿವು.

ಮಹಾರಾಷ್ಟ್ರದ ಕೃಷ್ಣಾ ಕಣಿವೆಗಳ ಜಲಾಶಯಗಳಿಂದ ಬಿಡುತ್ತಿರುವ ನೀರು, ಕರ್ನಾಟಕ ಹಾಗೂ ಮಹಾರಾಷ್ಟ್ರದ ಅಚ್ಚುಕಟ್ಟು ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯ ಜತೆಗೆ ಘಟಪ್ರಭಾದ ಹರಿವು ಕೂಡಾ ಸೇರಿದ್ದು ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಳಕ್ಕೆ ಕಾರಣವಾಗಿದೆ.

ಮುಂಜಾಗ್ರತೆಯ ಕ್ರಮವಾಗಿ ಕಳೆದ ನಾಲ್ಕು ದಿನಗಳಿಂದ ಜಲಾಶಯದಿಂದ 2.5 ಲಕ್ಷ ಕ್ಯುಸೆಕ್ ನೀರು ಬಿಟ್ಟಿದ್ದರಿಂದ ಜಲಾಶಯ ವ್ಯಾಪ್ತಿಯಲ್ಲಿ ನೆರೆಯ ಸಂಕಷ್ಟ ಎದುರಾಗಿಲ್ಲ. ಸದ್ಯ ಜಲಾಶಯದಿಂದ 2.5 ಲಕ್ಷ ಕ್ಯುಸೆಕ್ ನೀರು ಬಿಡಲಾಗುತ್ತಿದ್ದು, ಅದನ್ನು ಹೆಚ್ಚಿಸುವುದಿಲ್ಲ ಎಂದು ಅಣೆಕಟ್ಟು ವಲಯದ ಮುಖ್ಯ ಎಂಜಿನಿಯರ್ ಆರ್.ಪಿ. ಕುಲಕರ್ಣಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು