ಅಂಬೇಡ್ಕರ್ ಕಂಚಿನ ಪುತ್ಥಳಿ; ವೃತ್ತ ನಿರ್ಮಾಣಕ್ಕೆ ಚಾಲನೆ

ವಿಜಯಪುರ: ಇಲ್ಲಿನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ₹1.17 ಕೋಟಿ ಮೊತ್ತದಲ್ಲಿ ನಿರ್ಮಿಸಲಾಗುತ್ತಿರುವ ಡಾ.ಬಿ.ಆರ್ ಅಂಬೇಡ್ಕರ್ ಕಂಚಿನ ಪುತ್ಥಳಿ ಮತ್ತು ವೃತ್ತ ನಿರ್ಮಾಣ ಕಾಮಗಾರಿಗೆ ಸೋಮವಾರ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಭೂಮಿ ಪೂಜೆ ನೆರವೇರಿಸಿದರು.
ಇಡೀ ಉತ್ತರ ಕರ್ನಾಟಕಕ್ಕೆ ಮಾದರಿಯಾಗುವಂತೆ ವಿಜಯಪುರದಲ್ಲಿ ಅಂಬೇಡ್ಕರ್ ವೃತ್ತ ಮತ್ತು ಪುತ್ಥಳಿಯನ್ನು ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ಕಾರಜೋಳ ಸೂಚಿಸಿದರು.
ಮುಂಬರುವ ನವೆಂಬರ್ ಅಥವಾ ಸಂವಿಧಾನ ಸಮರ್ಪಣಾ ದಿನವಾದ ಜನವರಿ 26 ರೊಳಗೆ ಈ ಕಾಮಗಾರಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.
1974ರಲ್ಲಿ ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಹಾಗೂ ಉಪರಾಷ್ಟ್ರಪತಿ ಬಿ.ಡಿ ಜತ್ತಿ ಅವರು ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಈಗಿನ ಮೂರ್ತಿಯನ್ನು ಅನಾವರಣಗೊಳಿಸಿದ್ದರು ಎಂದು ಸ್ಮರಿಸಿದರು.
ಮೂರ್ತಿ ಬಹಳಷ್ಟು ಹಳೇಯದಾದ ಕಾರಣ ಬದಲಾವಣೆ ಮಾಡಲು ಶಾಸಕ ಎಂ.ಬಿ ಪಾಟೀಲ, ಬಸನಗೌಡ ಪಾಟೀಲ ಯತ್ನಾಳ, ಸಂಸದ ರಮೇಶ ಜಿಗಜಿಣಗಿ ಮತ್ತು ಜನತೆಯ ಆಶಯದಂತೆ ಕಂಚಿನ ಪುತ್ಥಳಿಯನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಕೃಷ್ಣ ಭಾಗ್ಯ ಜಲ ನಿಗಮದ ಎಸ್ಟಿಪಿ, ಟಿಎಸ್ಪಿ ಅನುದಾನದಲ್ಲಿ ವೃತ್ತ ನಿರ್ಮಾಣ ಮತ್ತು ಪುತ್ಥಳಿ ನಿರ್ಮಾಣವಾಗುತ್ತಿದೆ ಎಂದರು
ಸಂಸದ ರಮೇಶ ಜಿಗಜಿಣಗಿ, ಜಿ.ಪಂ. ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಶಾಸಕ ಎಂ.ಬಿ ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ದೇವಾನಂದ ಚವ್ಹಾಣ, ಮಾಜಿ ಶಾಸಕ ರಾಜು ಆಲಗೂರ, ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ಮುಖಂಡರಾದ ಅಡಿವೆಪ್ಪ ಸಾಲಗಲ್, ಅಭಿಷೇಕ ಚಕ್ರವರ್ತಿ, ಭೀಮರಾಯ ಜಿಗಜಿಣಗಿ ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.