ಮಂಗಳವಾರ, ಫೆಬ್ರವರಿ 7, 2023
27 °C

ಭಾರತದ ಭಾಗ್ಯವಿಧಾತ ಅಂಬೇಡ್ಕರ್: ವೈಜನಾಥ ಕರ್ಪೂರಮಠ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಅಂಬೇಡ್ಕರ್ ಭಾರತದ ಭಾಗ್ಯವಿಧಾತ, ವಿಶ್ವ ಜ್ಞಾನಿ, ಬಡವ, ಬಲ್ಲಿದವರ ಧ್ವನಿಯಾಗಿ ಶಕ್ತಿ ತುಂಬಿದ ಮಹಾಚೇತನ. ಸಂವಿಧಾನದ ಮೂಲಕ ಭಾರತೀಯರಿಗೆ ಸಮಾನ ನ್ಯಾಯ ಕೊಡಿಸಿದ ಹರಿಕಾರ, ಮಹಿಳೆಯರಿಗೆ ಸ್ವಾತಂತ್ರ್ಯ ಬದುಕು ಕಟ್ಟಿಕೊಟ್ಟ ಮಹಾನ್ ನಾಯಕ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಡಾ.ಬಿ.ಆರ್‌.ಅಂಬೇಡ್ಕರ್ ಅವರ 66ನೇ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಭಾರತದ ಕೃಷಿ, ವಿದ್ಯುತ್, ನೀರಾವರಿ ಕ್ಷೇತ್ರಗಳಲ್ಲಿ ಹಾಗೂ ಅನೇಕ ಕ್ಷೇತ್ರಗಳಲ್ಲಿ ತನ್ನದೇ ಆದ ಕೊಡುಗೆ ನೀಡಿದ್ದು ಭಾರತ ದೇಶದಲ್ಲಿ ರಿಸರ್ವ್‌ ಬ್ಯಾಂಕ್‌ ಸ್ಥಾಪನೆ ಮಾಡಿ ಈ ದೇಶಕ್ಕೆ ಭದ್ರ ಬುನಾದಿ ಹಾಕಿ ಕೊಟ್ಟಿದ್ದು ಅಂಬೇಡ್ಕರ್ ಎಂದು ಹೇಳಿದರು. 

ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಹಮೀದ ಮುಶ್ರೀಫ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಡಿ.ಎಲ್. ಚವ್ಹಾಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಮೀರ ಅಹ್ಮದ ಬಕ್ಷಿ, ಡಿ.ಎಚ್. ಕಲಾಲ, ಆರತಿ ಶಹಾಪೂರ,  ವಸಂತ ಹೊನಮೊಡೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು