ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿವಿಜಯಮಹಾಂತೇಶ ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬ ನಾಗರಿಕನಿಗೆ ನ್ಯಾಯ ದೊರಕುವ ನಿಟ್ಟಿನಲ್ಲಿ ಬೃಹತ್ ಸಂವಿಧಾನವನ್ನು ರಚಿಸಿ ಈ ದೇಶಕ್ಕೆ ನೀಡಿದ್ದು, ಶೋಷಿತರ ಹಕ್ಕಿಗಾಗಿ ಹೋರಾಡಿದ ಇವರನ್ನು ಪ್ರತಿಯೊಬ್ಬರೂ ಇಂದಿನ ದಿನವಲ್ಲದೇ ಪ್ರತಿದಿನ ಇವರನ್ನು ಸ್ಮರಿಸಿಕೊಳ್ಳುವುದರ ಮೂಲಕ ಗೌರವ ಸಲ್ಲಿಸಬೇಕು ಎಂದರು.

ಆದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಪೊಲೀಸ್ ಉಪ ಅಧೀಕ್ಷಕ ಶಂಕರ ಮಾರಿಹಾಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಸಹಾಯಕ ನಿರ್ದೇಶಕ ಪುಂಡಲೀಕ ಮಾನವರ, ಮುಖಂಡರಾದ ಅಡಿವೆಪ್ಪ ಸಾಲಗಲ್, ಶಾಂತಪ್ಪ ಶಹಾಪುರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.