ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಂಘರ್ಷ ತಪ್ಪಿಸಲು ಕಾಯ್ದೆಗೆ ತಿದ್ದುಪಡಿ’

ಸಹಜ ಸ್ಥಿತಿಯತ್ತ ಉದ್ಯಮ ವಲಯ: ಕಾರ್ಮಿಕ ಸಚಿವ ಅರಬೈಲು ಶಿವರಾಮ ಹೆಬ್ಬಾರ
Last Updated 31 ಜುಲೈ 2020, 13:57 IST
ಅಕ್ಷರ ಗಾತ್ರ

ಬಾಗಲಕೋಟೆ:'ಕಾನೂನು ಬಂಡವಾಳವಾಗಿಟ್ಟುಕೊಂಡು ಕಾರ್ಖಾನೆ ನಡೆಸಲು ಆಗುವುದಿಲ್ಲ. ಕೋವಿಡ್‌ನ ಸಂಕೀರ್ಣ ಪರಿಸ್ಥಿತಿಯಲ್ಲಿ ಕಾರ್ಖಾನೆ ಮಾಲೀಕರು ಹಾಗೂ ಕಾರ್ಮಿಕರು ಇಬ್ಬರೂ ಉಳಿಯಬೇಕು. ಆ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿಗೆ ಮುಂದಾಗಿದ್ದೇವೆ‘ ಎಂದು ಕಾರ್ಮಿಕ ಹಾಗೂ ಸಕ್ಕರೆ ಸಚಿವಅರಬೈಲು ಶಿವರಾಮ ಹೆಬ್ಬಾರ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ಕಾರ್ಖಾನೆ ಮಾಲೀಕರು ಹಾಗೂ ಕಾರ್ಮಿಕರ ನಡುವೆ ಸಂಘರ್ಷವಾಗಲು ಅವಕಾಶ ನೀಡದೇಸಂಪರ್ಕ ಸೇತುವೆಯಾಗಿ ಕಾರ್ಮಿಕ ಇಲಾಖೆ ಕೆಲಸ ಮಾಡಲಿದೆ‘ ಎಂದು ಹೇಳಿದರು.

ಕಾಯ್ದೆಗೆ ಕಾರ್ಮಿಕ ವಿರೋಧಿ ಆಶಯಗಳೊಂದಿಗೆ ತಿದ್ದುಪಡಿ ಮಾಡುತ್ತಿಲ್ಲ. ಬದಲಿಗೆ ನಮ್ಮಲ್ಲಿನ ಕಾರ್ಖಾನೆಗಳು ಬೇರೆ ರಾಜ್ಯಗಳಿಗೆ ಹೋಗದಂತೆ ತಡೆದು ಯುವಕರಿಗೆ ಇಲ್ಲಿಯೇ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕಿದೆ. ಹೀಗಾಗಿಇದರಲ್ಲಿ ಕಾರ್ಖಾನೆ ಮಾಲೀಕರು ಹಾಗೂ ಕಾರ್ಮಿಕರು ಇಬ್ಬರ ಹಿತವೂ ಅಡಗಿದೆ. ಇದು ಕಾರ್ಮಿಕ ವಿರೋಧಿ ಧೋರಣೆ ಅಲ್ಲ ಎಂದು ಸ್ಪಷ್ಟಪಡಿಸಿದರು.

’ಕೋವಿಡ್‌ನೊಂದಿಗೆ ಬದುಕಲು ಕಲಿಯಬೇಕು ಎಂಬ ನಿಲುವಿಗೆ ಕೈಗಾರಿಕಾ ವಲಯದಿಂದಲೂ ಉತ್ತಮ ಸ್ಪಂದನೆ ದೊರೆತಿದೆ. ಶೇ 75ರಷ್ಟು ಉದ್ಯಮಗಳು ಆರಂಭವಾಗಿವೆ. ಕೆಲವೇ ದಿನಗಳಲ್ಲಿ ರಾಜ್ಯದ ಉದ್ಯಮ ವಲಯ ಸಹಜ ಸ್ಥಿತಿಗೆ ಬರಲಿದೆ‘ ಎಂದು ಭವಿಷ್ಯ ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT