ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಮಹಿಳಾ ಸಾಂಸ್ಕೃತಿಕ ಹಬ್ಬಕ್ಕೆ ಸಜ್ಜು

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ
Last Updated 4 ಮಾರ್ಚ್ 2021, 12:51 IST
ಅಕ್ಷರ ಗಾತ್ರ

ವಿಜಯಪುರ:ಅಂತರರಾಷ್ಟ್ರೀಯ ಮಹಿಳಾ ದಿನ ಬಂತೆಂದರೆ ಇಲ್ಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಎಲ್ಲಿಲ್ಲದ ಸಡಗರ, ಸಂಭ್ರಮ. ಪ್ರತಿ ವರ್ಷ ವಿಶೇಷವಾಗಿ ಅದರಲ್ಲೂ ಅರ್ಥಪೂರ್ಣವಾಗಿಮಹಿಳಾ ದಿನವನ್ನು ಆಚರಿಸುವುದು ವಿಶ್ವವಿದ್ಯಾಲಯದ ಸಂಪ್ರದಾಯ.

ವಿಶ್ವವಿದ್ಯಾಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಈ ಬಾರಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್‌ 5ರಿಂದ 8ರ ವರೆಗೆ ‘ಮಹಿಳಾ ಸಾಂಸ್ಕೃತಿಕ ಹಬ್ಬ-2021’ ಹಮ್ಮಿಕೊಳ್ಳಲಾಗಿದೆ.

ಈ ಮಹಿಳಾ ಸಾಂಸ್ಕೃತಿಕ ಹಬ್ಬದ ಅಂಗವಾಗಿ ಮ್ಯಾರಥಾನ್, ಜುಂಬಾ ಮತ್ತು ಯೋಗ ತರಬೇತಿ, ಸೈಕಲ್ ಜಾಥಾ, ಮಹಿಳಾ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಮತ್ತು ಆಹಾರ ಮೇಳ, ಸಮಗ್ರ ಕೃಷಿ ಕೌಶಲ ತರಬೇತಿ ಹಾಗೂ ಕಾರ್ಯಾಗಾರ, ಪೋಸ್ಟರ್ ಮೇಕಿಂಗ್ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಮಹಿಳಾ ಆರೋಗ್ಯ ಉಪನ್ಯಾಸ, ವಿಡಿಯೋ ಮೇಕಿಂಗ್ ಸ್ಪರ್ಧೆ, ಕವಿಗೋಷ್ಠಿ, ಆರೋಗ್ಯ ತಪಾಸಣೆ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ‘ಹೆಣ್ಣು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ’ ಕುರಿತು ರಾಷ್ಟ್ರೀಯ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗಿದೆ.

ಮಾರ್ಚ್‌ 5ರಂದು ಬೆಳಿಗ್ಗೆ 6ಕ್ಕೆ ನಗರದ ನಾಲ್ಕು ಕಡೆಗಳಿಂದ ಆರಂಭವಾಗುವ ಮ್ಯಾರಾಥಾನ್ ಗಾಂಧಿ ಚೌಕ್‍ನಲ್ಲಿ ಸಮಾರೋಪಗೊಳ್ಳಲಿದೆ.

ಮಾರ್ಚ್ 6ರಂದು ಮಹಿಳಾ ವಿವಿಯ ಜ್ಞಾನಶಕ್ತಿ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ಬಾಗಲಕೋಟೆ ಬಸವೇಶ್ವರ ವಿದ್ಯಾವರ್ದಕ ಸಂಘದ ಕ್ವಾಲಿಟಿ ಅಶ್ಯುರೆನ್ಸ್ ಮುಖ್ಯ ಸಲಹೆಗಾರರು ಹಾಗೂ ಮಹಿಳಾ ವಿವಿಯ ವಿಶ್ರಾಂತ ಕುಲಪತಿ ಪ್ರೊ.ಮೀನಾ ಆರ್ ಚಂದಾವರಕರ ಅವರು ಮಹಿಳಾ ಸಾಂಸ್ಕೃತಿಕ ಹಬ್ಬ-2021 ಉದ್ಘಾಟಿಸುವರು. ಕಾರ್ಯಕ್ರಮದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅವರು ಅಧ್ಯಕ್ಷತೆ ವಹಿಸುವರು.

ಮಾರ್ಚ್ 8ರಂದು ನಡೆಯುವ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ‘ಹೆಣ್ಣು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ’ ಕುರಿತು ರಾಷ್ಟ್ರೀಯ ಕಾರ್ಯಾಗಾರದಲ್ಲಿ ಶಿವಮೊಗ್ಗದ ಕಟೀಲ್‌ ಅಶೋಕ ಪೈ ಮೆಮೊರಿಯಲ್ ಇನ್‍ಸ್ಟಿಟ್ಯೂಟ್‍ನ ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅಧ್ಯಕ್ಷತೆ ವಹಿಸುವರು. ಈ ಕಾರ್ಯಕ್ರಮಗಳಲ್ಲಿ ಕುಲಸಚಿವೆ ಪ್ರೊ.ಆರ್.ಸುನಂದಮ್ಮ, ಮೌಲ್ಯಮಾಪನ ಕುಲಸಚಿವ ಪ್ರೊಪಿ.ಜಿ.ತಡಸದ ಉಪಸ್ಥಿತರಿರಲಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಯುವಕರು, ವಿವಿಧ ಸಂಘ ಸಂಸ್ಥೆಯವರು ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ ಈ ಕಾರ್ಯಕ್ರಮಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಹಿಳಾ ಸಾಂಸ್ಕೃತಿಕ ಹಬ್ಬದ ಅಧ್ಯಕ್ಷೆ ಪ್ರೊ.ವಿಜಯಾ ಕೋರಿಶೆಟ್ಟಿ ತಿಳಿಸಿದ್ದಾರೆ.

*****

ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಹಾಗೂ ಜಿಲ್ಲೆ, ಹೊರ ಜಿಲ್ಲೆಯ ಮಹಿಳೆಯರು ಸೇರಿದಂತೆ ಸುಮಾರು 2500 ಜನ ಮಹಿಳಾ ಸಾಂಸ್ಕೃತಿಕ ಹಬ್ಬದಲ್ಲಿ ಪಾಲ್ಗೊಳ್ಳಲಿದ್ದಾರೆ
–ಪ್ರೊ.ವಿಜಯಾ ಕೋರಿಶೆಟ್ಟಿ, ಅಧ್ಯಕ್ಷೆ
ಮಹಿಳಾ ಸಾಂಸ್ಕೃತಿಕ ಹಬ್ಬ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT