ವಿಜಯಪುರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅನುಪಮ್ ಅಗರವಾಲ್ ಅವರನ್ನು ರಾಜ್ಯ ಸರ್ಕಾರ ಬುಧವಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕಕ್ಕೆ ಎಚ್.ಡಿ.ಆನಂದಕುಮಾರ್ ಅವರನ್ನು ನಿಯೋಜನೆ ಮಾಡಿದೆ.

2012ನೇ ಸಾಲಿನ ಐಪಿಎಸ್ ಅಧಿಕಾರಿಯಾಗಿರುವ ಎಚ್.ಡಿ.ಆನಂದಕುಮಾರ್ ಅವರು, ಬೆಂಗಳೂರು ಆಂತರಿಕ ಭದ್ರತಾ ವಿಭಾಗದ ಎಸ್‌ಪಿಯಾಗಿ ಸದ್ಯ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಚಾಮರಾಜನಗರ ಎಸ್‌ಪಿಯಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ.

ಖುಷಿ ನೀಡಿದೆ: ‘ವಿಜಯಪುರ ಜಿಲ್ಲೆಯಲ್ಲಿ ಒಂದೂವರೆ ವರ್ಷ ಕಾರ್ಯನಿರ್ವಹಿಸಿರುವುದು ತುಂಬಾ ಖುಷಿ ನೀಡಿದೆ. ಜಿಲ್ಲೆಯ ಬಗ್ಗೆ ಹೊರಗಿನಿಂದ ಕೇಳಿಬರುವ ಅಭಿಪ್ರಾಯಕ್ಕೂ ಇಲ್ಲಿಯ ವಾತಾವರಣಕ್ಕೂ ಬಹಳ ವ್ಯತ್ಯಾಸವಿದೆ. ಇಲ್ಲಿಯ ಜನ ಒಳ್ಳೆಯವರಿದ್ದಾರೆ. ಇಲಾಖೆ ಕೆಲಸ ಕಾರ್ಯಗಳಿಗೆ ಬೆಂಬಲ ನೀಡಿದ್ದಾರೆ. ಎಲ್ಲರಿಗೂ ಧನ್ಯವಾದಗಳು’ ಎಂದು ನಿರ್ಗಮಿತ ಎಸ್.ಪಿ. ಅನುಪಮ್ ಅಗರವಾಲ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು. ಅಗರವಾಲ್ ಅವರಿಗೆ ಇನ್ನೂ ಸ್ಥಳ ನಿಯುಕ್ತಿಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.