ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನ್ನಭಾಗ್ಯ: ₹ 20.29 ಕೋಟಿ ಹಣ ವರ್ಗಾವಣೆ

Published 31 ಜುಲೈ 2023, 16:04 IST
Last Updated 31 ಜುಲೈ 2023, 16:04 IST
ಅಕ್ಷರ ಗಾತ್ರ

ವಿಜಯಪುರ: ‘ಅನ್ನಭಾಗ್ಯ ಯೋಜನೆಯಡಿ ಜೂನ್‌ನಲ್ಲಿ ಪಡಿತರ ವಸ್ತುಗಳನ್ನು ಪಡೆದಿರುವ ಪಡಿತರ ಚೀಟಿದಾರರಿಗೆ 5 ಕೆ.ಜಿ ಅಕ್ಕಿಯ ಬದಲು ಹಣವನ್ನು ಆಯಾ ಪಡಿತರ ಚೀಟಿದಾರರ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ  ವರ್ಗಾವಣೆ ಮಾಡಲಾದೆ’ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್‌ ತಿಳಿಸಿದ್ದಾರೆ.

‘ಜಿಲ್ಲೆಯ ಅರ್ಹ 3,45,146 ಪಡಿತರ ಚೀಟಿಗಳ ಪೈಕಿ 11,94,067 ಸದಸ್ಯರಿಗೆ ₹170ರಂತೆ ಒಟ್ಟು ಹಣ ₹ 20.29 ಕೋಟಿಯನ್ನು ಆಯಾ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.

‘ನಾಲ್ಕು ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರು ಇರುವ ಅಂತ್ಯೋದಯ ಪಡಿತರ ಚೀಟಿಗೆ ಪ್ರತಿ ಹೆಚ್ಚುವರಿ ಸದಸ್ಯರಿಗೆ ₹ 170 ರಂತೆ ಹಣ ವರ್ಗಾವಣೆ ಮಾಡಲಾಗುವುದು. ಆದ್ಯತಾ ಕುಟುಂಬ ಪಡಿತರ ಚೀಟಿ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ ₹ 170 ರಂತೆ ಹಣ ವರ್ಗಾವಣೆ ಮಾಡಲಾಗುವುದು’ ಎಂದರು.

ಎಲ್ಲ ಅಂತ್ಯೋದಯ ಅನ್ನ ಯೋಜನೆ ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಮುಖ್ಯಸ್ಥರು ರಾಷ್ಟ್ರೀಕೃತ ಬ್ಯಾಂಕ್ ಖಾತೆ ಹೊಂದಿರಬೇಕು ಹಾಗೂ ಖಾತೆಯ ಇ-ಕೆವೈಸಿ ಆಗಿರಬೇಕು. ಇ-ಕೆವೈಸಿ ಆಗದೇ ಇದ್ದಲ್ಲಿ ಕೂಡಲೇ ಆಯಾ ಬ್ಯಾಂಕಿನ್ ಶಾಖೆಯನ್ನು ಸಂಪರ್ಕಿಸಿ ಇ-ಕೆವೈಸಿಯನ್ನು ಮಾಡಿಸಿ ಖಾತೆ ಚಾಲ್ತಿಯಲ್ಲಿಟ್ಟುಕೊಳ್ಳುವಂತೆ ಹಾಗೂ ಬ್ಯಾಂಕ್ ಖಾತೆ ಹೊಂದದೇ ಇದ್ದಲ್ಲಿ ಅಂಚೆ ಕಚೇರಿಯಲ್ಲಿ ಐಪಿಪಿಬಿ ಬ್ಯಾಂಕ್ ಖಾತೆಯನ್ನು ಹೊಂದಬಹುದು. ಪಡಿತರ ಚೀಟಿದಾರರು ಹೆಚ್ಚಿನ ಮಾಹಿತಿಗಾಗಿ ಆಯಾ ನ್ಯಾಯಬೆಲೆ ಅಂಗಡಿಕಾರರನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT