ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಳು ಕ್ಷೇತ್ರಗಳಿಗೆ ಜೆಡಿಎಸ್‌ ಅಭ್ಯರ್ಥಿಗಳ ಘೋಷಣೆ

ನಾಗಠಾಣ ಕ್ಷೇತ್ರದಿಂದ ಹಾಲಿ ಶಾಸಕ ದೇವಾನಂದ ಕಣಕ್ಕೆ
Last Updated 19 ಡಿಸೆಂಬರ್ 2022, 14:31 IST
ಅಕ್ಷರ ಗಾತ್ರ

ವಿಜಯಪುರ: ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಾತ್ಯತೀತ ಜನತಾ ದಳವು ಜಿಲ್ಲೆಯ ಎಂಟು ಕ್ಷೇತ್ರಗಳ ಪೈಕಿ ವಿಜಯಪುರ ನಗರ ಹೊರತು ಪಡಿಸಿ ಇನ್ನುಳಿದ ಏಳು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಶಾಸಕ ದೇವಾನಂದ ಚವ್ಹಾಣ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂಬ ದಟ್ಟ ಸುದ್ದಿಯ ನಡುವೆಯೇ ಜೆಡಿಎಸ್‌ಮರಳಿ ಕಣಕ್ಕೆ ಇಳಿಸಿರುವುದಾಗಿ ಹೆಸರು ಘೋಷಣೆ ಮಾಡಿರುವುದು ಜಿಲ್ಲಾ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಇಂಡಿ ವಿಧಾನಸಭಾ ಕ್ಷೇತ್ರಕ್ಕೆ ನಿರೀಕ್ಷೆಯಂತೆಬಿ.ಡಿ.ಪಾಟೀಲ ಅವರನ್ನು ಮತ್ತೊಮ್ಮೆ ಕಳಕ್ಕಿಳಿಸಲಾಗಿದೆ. ಕ್ಷೇತ್ರದಲ್ಲಿ ಪ್ರಬಲವಾಗಿರುವ ಕುರುಬ ಸಮಾಜಕ್ಕೆ ಸೇರಿರುವ ಬಿ.ಡಿ.ಪಾಟೀಲ ಅವರು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತೀವ್ರ ಪೈಪೋಟಿ ನೀಡಿದ್ದರು. ಅಲ್ಲದೇ, ಟಿಕೆಟ್‌ ಖಚಿತವಾಗಿದ್ದ ಬಿ.ಡಿ.ಪಾಟೀಲ ಅವರು ಅದಾಗಲೇ ಕ್ಷೇತ್ರದಲ್ಲಿ ಚುನಾವಣಾ ತಯಾರಿ ನಡೆಸಿದ್ದಾರೆ.

ನಿರೀಕ್ಷೆಯಂತೆ ದೇವರಹಿಪ್ಪರಗಿ ಕ್ಷೇತ್ರಕ್ಕೆ ರಾಜುಗೌಡ ಪಾಟೀಲ ಅವರ ಹೆಸರನ್ನು ಜೆಡಿಎಸ್‌ ಘೋಷಣೆ ಮಾಡಿದೆ. ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸೇರಿದ ಪ್ರಬಲ ಮುಖಂಡರಾಗಿರುವ ರಾಜುಗೌಡ ಪಾಟೀಲ, ಕಳೆದ ವಿಧಾನವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಕಡಿಮೆ ಮತಗಳ ಅಂತರದಿಂದ ಹಾಲಿ ಶಾಸಕ ಬಿಜೆಪಿಯ ಸೋಮನಗೌಡ ಪಾಟೀಲ ಸಾಸನೂರ ಅವರ ಎದುರು ಪರಾಭಗೊಂಡಿದ್ದರು.

ವರ್ಷದ ಹಿಂದೆ ನಡೆದಿದ್ದ ಸಿಂದಗಿ ಉಪ ಚುನಾವಣೆಯಲ್ಲಿ ಕಣಕ್ಕಳಿದಿದ್ದ ನಾಜಿಯಾ ಶಕೀಲ್‌ ಅವರ ಬದಲಿಗೆ ಗಾಣಿಗ ಸಮಾಜದ ಮುಖಂಡ ಶಿವಾನಂದ ಪಾಟೀಲ ಎಂಬ ಹೊಸ ಮುಖಕ್ಕೆ ಅವಕಾಶ ಕಲ್ಪಿಸಲಾಗಿದೆ.

ಉಳಿದಂತೆ ಬಬಲೇಶ್ವರ ಕ್ಷೇತ್ರಕ್ಕೆ ಬಸವರಾಜ ಹೊನವಾಡ,ಮುದ್ದೇಬಿಹಾಳಕ್ಕೆ ಡಾ.ಚನ್ನಬಸಪ್ಪ ಸಂಗಪ್ಪ ಸೋಲಾಪುರಮತ್ತು ಬಸವನ ಬಾಗೇವಾಡಿ ಕ್ಷೇತ್ರಕ್ಕೆ ಪರಮಾನಂದ ಬಸಪ್ಪ ತನಿಖೆದಾರ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.

ವಿಜಯಪುರ ನಗರ ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡದೇ ಕಾದುನೋಡುವ ತಂತ್ರ ಅನುಸರಿಸಲಾಗಿದೆ. ಯಾವ ಕಾರಣಕ್ಕೆ ಇದೊಂದು ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಅಂತಿಮಗೊಳಿಸಿಲ್ಲ ಎಂಬುದು ರಾಜಕೀಯವಾಗಿ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ಅಥವಾ ಬಿಜೆಪಿಯಿಂದ ಟಿಕೆಟ್‌ ಸಿಗದ ಅತೃಪ್ತರಿಗೆ ಮಣೆ ಹಾಕುವ ಲೆಕ್ಕಾಚಾರ ನಡೆದಿದೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT