ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರಕ್ಕೆ ವೈದ್ಯಕೀಯ ಕಾಲೇಜು ಘೋಷಣೆ

ಖಾಸಗಿ ಸಹಭಾಗಿತ್ವದಲ್ಲಿ ನಿರ್ವಹಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Last Updated 30 ಸೆಪ್ಟೆಂಬರ್ 2022, 12:43 IST
ಅಕ್ಷರ ಗಾತ್ರ

ವಿಜಯಪುರ:ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಘೋಷಿಸಿದರು.

ಶ್ರೀ ಸಿದ್ದೇಶ್ವರ ಲೋಕ ಕಲ್ಯಾಣ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಜೆಎಸ್‌ಎಸ್‌ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆಯನ್ನು ಶುಕ್ರವಾರ ನೆರವೇರಿಸಿ ಅವರು ಮಾತನಾಡಿದರು.

ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ(ಪಿಪಿಪಿ ಮಾದರಿ) ನಿರ್ವಹಣೆ ಮಾಡಲಾಗುವುದು ಎಂದು ಹೇಳುವ ಮೂಲಕ ಶಾಸಕ ಯತ್ನಾಳ ಅವರ ಬೇಡಿಕೆಗೆ ಸ್ಪಂದಿಸಿದರು.

ಯತ್ನಾಳ ಅವರು ಜೆಎಸ್‌ಎಸ್‌ ಆಸ್ಪತ್ರೆ ಆರಂಭಿಸುವ ಮೂಲಕ ಬಡವರಿಗಾಗಿ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಿರುವುದು ಪುಣ್ಯದ ಕೆಲಸ, ದೇವರು ಮೆಚ್ಚುವ ಕೆಲಸ ಅವರು ಮಾಡಿದ್ದಾರೆ. ಅವರಿಗೆ ಪುಣ್ಯ ಪ್ರಾಪ್ತಿಯಾಗಲಿದೆ. ಆಸ್ಪತ್ರೆಗೆ ಸಿದ್ದೇಶ್ವರ ಶ್ರೀಗಳ ಹೆಸರು ನಾಮಕರಣ ಮಾಡಿರುವುದು ಸೂಕ್ತವಾಗಿದೆ. ಶ್ರೀಗಳ ಹೆಸರಿನಿಂದಲೇ ಅರ್ಧ ರೋಗ ನಿವಾರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ವಿಜಯಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಅನುದಾನ ನೀಡಲಾಗುವುದು. ಜನವರಿ ಅಥವಾ ಫೆಬ್ರುವರಿಯಲ್ಲಿ ಪ್ರಧಾನಿಯಿಂದ ವಿಮಾನ ನಿಲ್ದಾಣ ಉದ್ಘಾಟಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯ ದಶಕದ ಬೇಡಿಕೆಯಾಗಿದ್ದರೇವಣ ಸಿದ್ದೇಶ್ವರ ಯೋಜನೆಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು. ಹೊಸಕ್ರೀಡಾಂಗಣ, ದ್ರಾಕ್ಷಿ ಮಂಡಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ವಿಜಯಪುರ, ಕಲಬುರಗಿಯಲ್ಲಿ ಮೂರು ತಿಂಗಳಲ್ಲಿ ಜವಳಿಪಾರ್ಕ್ ಪ್ರಾರಂಭಿಸಲಾಗುವುದು ಎಂದರು.

ವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವಣ್ಣನ ಹೆಸರು, ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು, ಸೆಟಲೈಟ್‌ ಬಸ್‌ ನಿಲ್ದಾಣಕ್ಕೆ ರಾಯಣ್ಣನ ಹೆಸರನ್ನು ನಾಮಕರಣ ಮಾಡಲು ಸರ್ಕಾರದಿಂದ ಅನುಮೋದನೆ ನೀಡಲಾಗುವುದು ಎಂದು ಹೇಳಿದರು.

ರಾಜ್ಯದ 14 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯ ಸೌಲಭ್ಯ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ರೈತ ಕೂಲಿಕಾರ್ಮಿಕರ, ಮೀನುಗಾರರ ಮಕ್ಕಳಿಗೂ ಯೋಜನೆ ವಿಸ್ತರಿಸಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಕೃಷ್ಣೆಯ ತೀರದ ಅಭಿವೃದ್ಧಿಗೆ ಒತ್ತು ನೀಡಿದ್ದೇವೆ.ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣದಲ್ಲಿ ವಿಜಯಪುರದ ಪಾಲು ಇರಲಿದೆ ಎಂದರು.

ಸಿದ್ದೇಶ್ವರ ಶ್ರೀಗಳು ಕರ್ನಾಟಕದ ಆಧ್ಯಾತ್ಮಿಕ ಮತ್ತು ಧಾರ್ಮಿಕ ಮಾರ್ಗದರ್ಶಕರಾಗಿದ್ದಾರೆ. ರಾಜ್ಯ ಸರ್ಕಾರ ಜನ ಕಲ್ಯಾಣ ಕೆಲಸ ಮಾಡುತ್ತಿದೆ. ನಾಡುಕಟ್ಟುವ ಕೆಲಸ ಪ್ರಾಮಾಣಿಕ, ನಿಷ್ಠೆಯಿಂದ ಮಾಡುತ್ತಿದ್ದೇವೆ. ಇದಕ್ಕೆ ಶ್ರೀಗಳ ಸಂಪೂರ್ಣ ಆಶೀರ್ವಾದ ಬೇಕು ಎಂದು ಮನವಿ ಮಾಡಿದರು.

ಶ್ಲಾಘನೀಯ:

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಬಹುತೇಕ ರಾಜಕಾರಣಿಗಳು ರಾಜಕೀಯ ಬಿಟ್ಟು ಬೇರೇನೂ ಮಾಡುವುದಿಲ್ಲ. ಆದರೆ, ಯತ್ನಾಳ ಅವರು ಸಿದ್ದಸಿರಿ ಸಂಸ್ಥೆ ಮೂಲಕ ಬ್ಯಾಂಕ್‌, ಲೋಕಕಲ್ಯಾಣ ಚಾರಿಟಬಲ್ ಟ್ರಸ್ಟ್ ಮೂಲಕ ಆಸ್ಪತ್ರೆ ಮಾಡಿರುವುದು ಶ್ಲಾಘನೀಯ ಎಂದು ಹೇಳಿದರು.

21ನೇ ಶತಮಾನದಲ್ಲಿ ಭಾರತ ಕಟ್ಟುವುದು ಕೇವಲ ರಸ್ತೆ, ಸೇತುವೆ, ಜಿಡಿಪಿ ಮಾತ್ರದಿಂದ ಅಲ್ಲ. ದೇಶದ ಜನರ ಆರೋಗ್ಯ ಕಾಪಾಡುವುದು ಅತಿ ಮುಖ್ಯ ಎಂದರು.

ಕೋವಿಡ್‌ ಸಂದರ್ಭದಲ್ಲಿ ದೇಶದಆರ್ಥಿಕ ಪರಿಸ್ಥಿತಿ ಹದಗೆಡದಂತೆ ಕಾಪಾಡುವ ಜೊತೆಗೆ200 ಕೋಟಿ ಜನರಿಗೆಕೋವಿಡ್ ಲಸಿಕೆ ಹಾಕುವ ಜೊತೆಗೆ ಭಾರತ ವಿಶ್ವದಮುಂದುವರಿದ ದೇಶಗಳಿಗಿಂತ ಮುನ್ನೆಡೆ ಕಾಯ್ದುಕೊಂಡಿದೆ ಎಂದರು.

ಆರೋಗ್ಯ ಕ್ಷೇತ್ರದ ಸುಧಾರಣೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ. ಇಂದು ಪ್ರತಿ ವರ್ಷ 90 ಸಾವಿರ ಹೊಸ ವೈದ್ಯರು ದೇಶದಲ್ಲಿ ಹೊಸದಾಗಿ ರೂಪುಗೊಳುತ್ತಿದ್ದಾರೆ ಎಂದು ಹೇಳಿದರು.

ಮೂಲಸೌಲಭ್ಯ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಒತ್ತು ನೀಡಿದೆ.ಭಯೋತ್ಪಾದಕನ್ನು ಅವರ ನೆಲದಲ್ಲೇ ಹೊಡೆದುರುಳಿಸುವ ಮೂಲಕ ಸುರಕ್ಷಿತ ಭಾರತ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದರು.

ಉತ್ತರ ಕರ್ನಾಟಕ, ವಿಜಯಪುರದ ಹುಲಿ ಯತ್ನಾಳ. ಅವರೊಬ್ಬರಕ್ರಿಯಾಶೀಲ ನಾಯಕ. ಅವರ ನಾಯಕತ್ವದಲ್ಲಿ ವಿಜಯಪುರದ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ. ಯತ್ನಾಳಗೆ ಬೆಂಬಲವಾಗಿ ನಿಲ್ಲುತ್ತೇನೆ.

–ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT