ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

₹188 ಕೋಟಿ ವೆಚ್ಚದಲ್ಲಿ ಇಥೆನಾಲ್ ಉತ್ಪಾದನಾ ಘಟಕ ಸ್ಥಾಪನೆ: ಶಾಸಕ ಪಾಟೀಲ

ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ವಾರ್ಷಿಕ ಸಭೆ
Published : 23 ಸೆಪ್ಟೆಂಬರ್ 2024, 15:44 IST
Last Updated : 23 ಸೆಪ್ಟೆಂಬರ್ 2024, 15:44 IST
ಫಾಲೋ ಮಾಡಿ
Comments

ಇಂಡಿ: ಭೀಮಾಶಂಕರ ಸಕ್ಕರೆ ಕಾರ್ಖಾನೆಯಲ್ಲಿ ಪ್ರಸಕ್ತ ವರ್ಷದಲ್ಲಿಯೇ ₹188 ಕೋಟಿ ವೆಚ್ಚದಲ್ಲಿ ಇಥೆನಾಲ್ ಉತ್ಪಾದನಾ ಘಟಕ ಸ್ಥಾಪನೆ ಮಾಡಲಾಗುವುದು. ಡಿಸೆಂಬರ್ ತಿಂಗಳಲ್ಲಿಯೇ ಕಾರ್ಯಾರಂಭ ಆಗಲಿದೆ ಎಂದು ಶಾಸಕ ಮತ್ತು ಕಾರ್ಖಾನೆಯ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹೇಳಿದರು.

ಇಂಡಿ ತಾಲ್ಲೂಕಿನ ಮರಗೂರ ಗ್ರಾಮದ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಆಯೋಜಿಸಿದ್ದ 6ನೇ ವಾರ್ಷಿಕ ಸರ್ವ ಸಾಧಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಸೋಮವಾರ ಅವರು ಮಾತನಾಡಿದರು.

ಉದ್ಘಾಟನೆಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳನ್ನು ಹಾಗೂ ಸಹಕಾರಿ ರಂಗಕ್ಕೆ ಸೇರಿದ ಎಲ್ಲಾ ಸಚಿವರನ್ನು ಕರೆಸಲಾಗುವದು ಎಂದರು.

ಕಳೆದ 2017 –2018ರಲ್ಲಿ ಪ್ರಾರಂಭವಾದ ಈ ಕಾರ್ಖಾನೆಗೆ ಕಬ್ಬು ಕಳಿಸಿದ ರೈತರಿಗೆ ಕೇಂದ್ರ ಸರ್ಕಾರದ ಎಫ್‌ಆರ್‌ಪಿ ದರಕ್ಕಿಂತ ಹೆಚ್ಚಿನ ದರ ನೀಡಲಾಗಿದೆ. ಕಳೆದ 6 ವರ್ಷಗಳಲ್ಲಿ ₹52.58 ಕೋಟಿ ಹಣವನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಇಲ್ಲಿಯವರೆಗೆ ರೈತರ ಬಿಲ್ಲಿನ ಯಾವದೇ ಹಣ ಬಾಕಿ ಉಳಿಸಿಕೊಂಡಿಲ್ಲ. ರೈತರಿಗೆ ಅನ್ಯಾಯವಾಗದಂತೆ ನೋಡಿಕೊಂಡಿದ್ದೇವೆ ಎಂದರು.

ಕಾರ್ಖಾನೆ ಪ್ರತೀ ವರ್ಷ ಕನಿಷ್ಟ 5.5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಬೇಕು. ಆದರೆ ಅಷ್ಟು ನುರಿಸುವದು ಕಷ್ಟವಾಗುತ್ತಿದೆ. ರೈತರು ಇನ್ನು ಮುಂದೆಯಾದರೂ ಕಾರ್ಖಾನೆಗೆ ಹೆಚ್ಚಿನ ಮತ್ತು ಗುಣಮಟ್ಟದ ಕಬ್ಬು ಪೂರೈಕೆ ಮಾಡಬೇಕೆಂದು ಮನವಿ ಮಾಡಿಕೊಂಡರು.

ಸಭೆಯಲ್ಲಿ ಸಹಕಾರಿ ರತ್ನ ಶ್ರೀಮಂತ ಇಂಡಿ, ರೈತ ಮುಖಂಡ ಗುರುನಾಥ ಬಗಲಿ, ಶರಣಗೌಡ ಪಾಟೀಲ, ಎಸ್.ಬಿ.ಬೂದಿಹಾಳ ಮಾತನಾಡಿ, ಕಾರ್ಖಾನೆಯ ಸ್ಥಳದಲ್ಲಿ ರೈತ ಸಮ್ಮೇಳನಗಳನ್ನು ಏರ್ಪಡಿಸಬೇಕು ಎಂದು ಸಲಹೆ ನೀಡಿದರು.

ವೇದಿಕೆಯಲ್ಲಿ ಉಪಾಧ್ಯಕ್ಷ ಎಂ.ಆರ್.ಪಾಟೀಲ, ನಿರ್ದೇಶಕರಾದ ರೇವಗೊಂಡಪ್ಪಗೌಡ ಪಾಟೀಲ, ಜೆಟ್ಟೆಪ್ಪ ರವಳಿ, ಸುರೇಶಗೌಡ ಪಾಟೀಲ, ಬಿ.ಎಂ.ಕೋರೆ, ಅಶೋಕ ಗಜಾಕೋಶ, ಸಿದ್ದಣ್ಣ ಬಿರಾದಾರ, ವಿಶ್ವನಾಥ ಬಿರಾದಾರ, ಬಸವರಾಜ ಧನಶ್ರೀ, ವಿಶ್ವನಾಥ ಬಿರಾದಾರ, ಲಲಿತಾ ನಡಗೇರಿ, ಸರೋಜಿನಿ ಪಾಟೀಲ, ವ್ಯವಸ್ಥಾಪಕ ನಿರ್ದೇಶಕಿ ಎಸ್.ಕೆ.ಭಾಗ್ಯಶ್ರೀ, ಕಂದಾಯ ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಇದ್ದರು.
ಎಂ.ಆರ್.ಪಾಟೀಲ ಸ್ವಾಗತಿಸಿದರು. ಸಂತೋಷ ವಾಲೀಕಾರ ಪ್ರಾರ್ಥಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT