ಬಸವನಬಾಗೇವಾಡಿ: ‘ದೇಶದಲ್ಲಿ ಸಂವಿಧಾನ ಉಳಿಯಬೇಕಾದರೆ ಪಾರದರ್ಶಕ ಚುನಾವಣೆಗಳಾಗಬೇಕು. ಯಾರೂ ಮತಗಳ್ಳತನದಂತಹ ದುಸ್ಸಾಹಸಕ್ಕೆ ಕೈ ಹಾಕಬಾರದು’ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

ಬಸವನಬಾಗೇವಾಡಿ ಮತಕ್ಷೇತ್ರದ ಬಸವನಬಾಗೇವಾಡಿ ಹಾಗೂ ಕೊಲ್ಹಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡಿದ್ದ ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನಕ್ಕೆ ಸಹಿ ಹಾಕಿ ಚಾಲನೆ ನೀಡಿ ಮಾತನಾಡಿದರು.

‘ಬಿಜೆಪಿಯವರು ಮತಗಳ್ಳತನದಂತಹ ದುಸ್ಸಾಹಸಕ್ಕೆ ಕೈ ಹಾಕಿದ ಪರಿಣಾಮ ಬಿಹಾರ ಅಷ್ಟೇ ಅಲ್ಲದೇ ರಾಜ್ಯದ ಕಲಬುರಗಿ ಜಿಲ್ಲೆಯ ಆಳಂದದಲ್ಲೂ ಮತಗಳ್ಳತನ ಘಟನೆಗಳಾಗಿರುವ ಅನೇಕ ನಿದರ್ಶನಗಳಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದೊಂದು ಮತವು ಅತ್ಯಮೂಲ್ಯ. ಒಂದು ಮತದ ಕೊರತೆಯಿಂದ ಲೋಕಸಭೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿ ಹುದ್ದೆ ಕಳೆದುಕೊಂಡಿದ್ದರು ಎಂಬುದು ಯಾರೂ ಮರೆಯಬಾರದು’ ಎಂದರು.

ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಸುರೇಶಗೌಡ ಪಾಟೀಲ ಪ್ರಸ್ತಾವಿಕ ಮಾತುಗಳಾಡಿದರು. ಹಿರಿಯ ಕಾಂಗ್ರೆಸ್ ನಾಯಕ ಸಿದ್ದಣ್ಣ ನಾಗಠಾಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ, ಜಿ.ಪಂ ಮಾಜಿ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ಬಸವನಬಾಗೇವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಕೊಲ್ಹಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಫೀಕ್ ಪಕಾಲಿ, ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಘಟಕದ ಜಿಲ್ಲಾಧ್ಯಕ್ಷ ಹನೀಫ್ ಮಕಾನದಾರ, ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಉಪಾಧ್ಯಕ್ಷ ಅಶೋಕ ಹಾರಿವಾಳ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರುಕ್ಮಿಣಿ ರಾಠೋಡ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಸಹಿ ಹಾಕಿದರು.

ದೇಶಾದ್ಯಂತ ಕಾಂಗ್ರೆಸ್ ಹಮ್ಮಿಕೊಂಡಿರುವ ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನಕ್ಕೆ ಬಸವನಬಾಗೇವಾಡಿಯಲ್ಲೂ ಚಾಲನೆ ನೀಡಲಾಗಿದ್ದು ಪಾರದರ್ಶಕ ನ್ಯಾಯಸಮ್ಮತ ಚುನಾವಣೆ ಬಯಸುವ ಎಲ್ಲಾ ಮತದಾರರು ಈ ಅಭಿಯಾನದಲ್ಲಿ ಭಾಗವಹಿಸಬೇಕು
ಶಿವಾನಂದ ಪಾಟೀಲ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.