ವಿಜಯಪುರ: ವಿಶೇಷ ಘಟಕ ಯೋಜನೆ–ಗಿರಿಜನ ಉಪಯೋಜನೆ ಅಡಿಯಲ್ಲಿ 10+1 ಕುರಿ–ಮೇಕೆ ಘಟಕಗಳನ್ನು ಅನುಷ್ಠಾನಗೊಳಿಸಲು ಸಹಾಯಧನ ನೀಡುವ ಕುರಿತು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅರ್ಜಿಗಳನ್ನು ಆಹ್ವಾನಿಸಿದೆ. ಜಿಲ್ಲೆಯ ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕೂಲಿ ಮತ್ತು ಕೃಷಿ ಕಾರ್ಮಿಕರು, ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಜಿಲ್ಲೆಗೆ ಎಸ್ಸಿಪಿ (27) ಹಾಗೂ ಟಿಎಸ್ಪಿ (2) ಸೇರಿ ಒಟ್ಟು 29 ಘಟಕಗಳನ್ನು ಮಂಜೂರು ಮಾಡಲಾಗಿದ್ದು, ಅವುಗಳನ್ನು 8 ವಿಧಾನಸಭಾ ಕ್ಷೇತ್ರಗಳವಾರು ಹಂಚಿಕೆ ಮಾಡಲಾಗಿದೆ. ಪ್ರತಿ ಕ್ಷೇತ್ರದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಘಟಕಗಳನ್ನು ನಿಗದಿಪಡಿಸಲಾಗಿದೆ. ಫಲಾನುಭವಿಗಳನ್ನು ಸಂಬಂಧಿತ ಕ್ಷೇತ್ರದ ಶಾಸಕರ ಅಧ್ಯಕ್ಷತೆಯ ತಾಲೂಕು ಮಟ್ಟದ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿದಾರರು ಆರ್ಡಿ ಸಂಖ್ಯೆಯ ಜಾತಿ ಪ್ರಮಾಣಪತ್ರ ಹೊಂದಿರಬೇಕು ಹಾಗೂ ಫ್ರುಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡಿರಬೇಕು. ವಯೋಮಿತಿ 18 ರಿಂದ 60 ವರ್ಷಗಳೊಳಗಿರಬೇಕು. ಮಾರ್ಚ್ 3ರಿಂದ ನಿಗಮದ ವಿಜಯಪುರ ಕಚೇರಿಯಲ್ಲಿ ಅರ್ಜಿ ಲಭ್ಯವಿದ್ದು, ಮಾರ್ಚ್ 12ರೊಳಗಾಗಿ ಎರಡು ಪ್ರತಿಗಳಲ್ಲಿ ಖುದ್ದಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ 9902363143 ಅಥವಾ 08352-200079 ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.